ಹುಮನಾಬಾದ್: ಎಟಿಎಂ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಸಾಬೀತವಾಗಿದ್ದರಿಂದ ಅಪರಾಧಿಗಳಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ ಸ್ಥಳೀಯ ಜೆಎಂಎಫ್‌ಸಿ ನ್ಯಾಯಲಯ ನ್ಯಾಯಾಧೀಶರು ಆದೇಶಿಸಿದ್ದಾರೆ.
ತಾಲ್ಲೂಕಿನ ಹಳ್ಳಿಖೇಡ್ ಬಿ. ಪಟ್ಟಣದ ಎಸ್‌ಬಿಐ ಎಟಿಎಂನಲ್ಲಿನ ಹಣ 2024 ಮೇ 2ರಂದು ಕಳ್ಳತನವಾಗಿತ್ತು. ಈ ಬಗ್ಗೆ ಹಳ್ಳಿಖೇಡ್ ಬಿ. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಹುಮನಾಬಾದ್ ಸಿಪಿಐ ಗುರು ಪಾಟೀಲ ತನಿಖೆ ಕೈಗೊಂಡು ಹರಿಯಾಣ ರಾಜ್ಯದ ಶಾಹಿದ್ ತಂದೆ ಕಮಲಖಾನ್, ಅಲೀಂ ಅಕ್ಬರ್, ಇಲಿಯಾಸ್ ಅಬ್ದುಲ್ ಎಂಬುವವರನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದಾಗ ಆರೋಪ ಸಾಬೀತಾಗಿತ್ತು. ಇದರಿಂದ ಹುಮನಾಬಾದ್ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಸಣ್ಣಹನಮಗೌಡ ಅವರು ಅಪರಾಧಿಗಳಿಗೆ 3 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ ತಲಾ ₹20,000 ದಂಡ ವಿಧಿಸಿದ್ದಾರೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಶ್ರೀನಿವಾಸ , ಸುಭಾಷ ವಾದ ಮಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.