ಬಸವಕಲ್ಯಾಣ: ‘ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕರೆ ಈ ಭಾಗ ವರ್ಷದ ಬಳಿಕ ನಿಜಾಮ ಆಡಳಿತದಿಂದ ವಿಮೋಚನೆಗೊಂಡಿತು’ ಎಂದು ಶಾಸಕ ಶರಣು ಸಲಗರ ಹೇಳಿದರು.
ತಾಲ್ಲೂಕು ಆಡಳಿತ ಬುಧವಾರ ಆಯೋಜಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಈ ಸಲ ಅತಿವೃಷ್ಟಿಯಿಂದ ರೈತರಿಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಜಮೀನಿನಲ್ಲಿ ನೀರು ಸಂಗ್ರಹಗೊಂಡು ಬೆಳೆ ಹಾಳಾಗಿದೆ. ಸರ್ಕಾರ ಶೀಘ್ರ ಪರಿಹಾರ ನೀಡಬೇಕು. ತಾಲ್ಲೂಕಿನ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲು ಪ್ರಯತ್ನಿಸುತ್ತೇನೆ’ ಎಂದರು.
ಉಪ ವಿಭಾಗಾಧಿಕಾರಿ ಮುಕುಲ್ ಜೈನ್, ತಹಶೀಲ್ದಾರ್ ದತ್ತಾತ್ರೇಯ ಗಾದಾ, ದಿಲೀಪ ಪತಂಗೆ, ಭಾಗ್ಯಶ್ರೀ ಬಿರಾದಾರ ಮಾತನಾಡಿದರು.
ಇದಕ್ಕೂ ಮೊದಲು ಕೋಟೆಯಿಂದ ಮುಖ್ಯರಸ್ತೆಯ ಮೂಲಕ ಭಾವಚಿತ್ರದ ಮೆರವಣಿಗೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.