ADVERTISEMENT

ಲೈಂಗಿಕ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 15:26 IST
Last Updated 10 ಆಗಸ್ಟ್ 2021, 15:26 IST
ಬೀದರ್‌ನಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಲೈಂಗಿಕ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ವಿತರಣೆಗೆ ಚಾಲನೆ ನೀಡಿದರು
ಬೀದರ್‌ನಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಲೈಂಗಿಕ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ವಿತರಣೆಗೆ ಚಾಲನೆ ನೀಡಿದರು   

ಬೀದರ್: ಲೈಂಗಿಕ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ವಿತರಣೆಗೆ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ನಗರದಲ್ಲಿ ಚಾಲನೆ ನೀಡಿದರು.

ಹನುಮಂತು ಅಲಿಯಾಸ್ ಶಶಿಕಲಾ ಹಾಗೂ ಭೀಮು ಅಲಿಯಾಸ್ ಭೂಮಿಕಾ ಅವರಿಗೆ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಣೆ ಮಾಡಿದರು.

ಆನ್‍ಲೈನ್‍ನಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಗುರುತಿನ ಚೀಟಿ ಅರ್ಜಿ ನಮೂನೆಗಳು ದೊರೆಯುತ್ತವೆ. ಅರ್ಜಿ ನಮೂನೆ ಭರ್ತಿ ಮಾಡಿ ತಾಲ್ಲೂಕು ಮಟ್ಟದ ಸಮಿತಿಗೆ ನೀಡಬೇಕು. ಜಿಲ್ಲಾಮಟ್ಟದ ಸಮಿತಿ ಅರ್ಜಿಗಳನ್ನು ಪರಿಶೀಲಿಸಿ, ಅರ್ಹರಿಗೆ ಗುರುತಿನ ಚೀಟಿ ಕೊಡಲಿದೆ ಎಂದು ತಿಳಿಸಿದರು.

ADVERTISEMENT

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರತ್ನಾಕರ, ನಿರೀಕ್ಷಕಿ ಯಲ್ಲಬ್ಬ ಬಿ, ಮಹಿಳಾ ಶಕ್ತಿ ಕೇಂದ್ರದ ಗೀತಾಂಜಲಿ, ಶಾರದಾ, ಜಿಲ್ಲಾಧಿಕಾರಿ ಕಚೇರಿಯ ಸತೀಶ ವಾಲೆ, ಅಮರ ರಾಸೂರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.