ADVERTISEMENT

ಮಹಿಳೆಯರು ಸುರಕ್ಷಿತವಾಗಿದ್ದರೆ ಕುಟುಂಬ, ದೇಶದ ಪ್ರಗತಿ

ಮಹಿಳಾ ಸಬಲೀಕರಣ ಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅಭಿಮತ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 14:20 IST
Last Updated 29 ನವೆಂಬರ್ 2022, 14:20 IST
ಬೀದರ್‌ನಲ್ಲಿ ಆಧುನಿಕ ಭಾರತದ ಪಿತಾಮಹ ರಾಜಾರಾಮ್‍ ಮೋಹನರಾಯ್ 250ನೇ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ಮಹಿಳಾ ಸಬಲೀಕರಣ ಜಾಗೃತಿ ಕಾರ್ಯಕ್ರಮವನ್ನು ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಭಾರತಿ ವಸ್ತ್ರದ ಉದ್ಘಾಟಿಸಿದರು
ಬೀದರ್‌ನಲ್ಲಿ ಆಧುನಿಕ ಭಾರತದ ಪಿತಾಮಹ ರಾಜಾರಾಮ್‍ ಮೋಹನರಾಯ್ 250ನೇ ಜಯಂತಿ ಪ್ರಯುಕ್ತ ಏರ್ಪಡಿಸಿದ್ದ ಮಹಿಳಾ ಸಬಲೀಕರಣ ಜಾಗೃತಿ ಕಾರ್ಯಕ್ರಮವನ್ನು ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಭಾರತಿ ವಸ್ತ್ರದ ಉದ್ಘಾಟಿಸಿದರು   

ಬೀದರ್‌: ದೇಶದಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದರೆ ಮಾತ್ರ ಅವರ ಕುಟುಂಬ ಹಾಗೂ ದೇಶ ಪ್ರಗತಿ ಸಾಧಿಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅಭಿಪ್ರಾಯಪಟ್ಟರು.
ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗ ಮಂದಿರದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ಹಾಗೂ ಕೊಲ್ಕಾತ್ತಾದ ರಾಜಾರಾಮ ಮೋಹನರಾಯ್ ಗ್ರಂಥಾಲಯ ಪ್ರತಿಷ್ಠಾನದ ಆಶ್ರಯದಲ್ಲಿ ಆಧುನಿಕ ಭಾರತದ ಪಿತಾಮಹ ರಾಜಾರಾಮ್‍ ಮೋಹನರಾಯ್ 250ನೇ ಜಯಂತಿ ಪ್ರಯುಕ್ತ ಮಹಿಳಾ ಸಬಲೀಕರಣದ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯರು ಸಾಧನೆ ಮಾಡಿದ್ದಾರೆ. ಸಮಾಜ ಮಹಿಳೆಯರ ಸುರಕ್ಷತೆ ಇನ್ನಷ್ಟು ಒತ್ತು ಕೊಡಬೇಕಾಗಿದೆ ಎಂದು ಹೇಳಿದರು.


ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಪ್ರವೀಣಕುಮಾರ ಮಿರಾಗಂಜಕರ್ ಮಾತನಾಡಿ, ವಿದ್ಯಾರ್ಥಿನಿಯರು ಶಿಕ್ಷಣದ ಮೂಲಕವೇ ಸಬಲರಾಗಬೇಕು ಎಂದು ತಿಳಿಸಿದರು.

ADVERTISEMENT


ಡಾ.ಶ್ರೇಯಾ ಮಹೀಂದ್ರಕರ್, ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಸಿದ್ಧಾರ್ಥ ಭಾವಿಕಟ್ಟೆ ಮಾತನಾಡಿದರು.


ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರ ಹಾಗೂ ಬಹುಮಾನ ವಿತರಿಸಲಾಯಿತು.
ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಭಾರತಿ ವಸ್ತ್ರದ, ಕಲಾವಿದ ಶಂಭುಲಿಂಗ ವಾಲ್ದೊಡ್ಡಿ, ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಸವಿತಾ, ರಘು ರಾಜನಳ್ಳಿ, ಮಹಾದೇವಪ್ಪ ಮಾನೆ, ಮಾಸ್ಟರ್ ಫಿಲಿಪ್, ವೀರಣ್ಣ, ಝರೆಪ್ಪ ಇದ್ದರು.


ಜಾಥಾ:

ನಗರದ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ಆವರಣದಿಂದ ಮಹಿಳಾ ಸಬಲೀಕರಣ ಜಾಗೃತಿ ಜಾಥಾ ನಡೆಯಿತು.

ಭಿತ್ತಿಚಿತ್ರ ಹಾಗೂ ಘೋಷಣಾ ಫಲಕಗಳನ್ನು ಹಿಡಿದ ವಿದ್ಯಾರ್ಥಿಗಳು ಡಾ.ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಶಿವಾಜಿ ವೃತ್ತ, ಶಿವಶರಣ ಹರಳಯ್ಯ ವೃತ್ತ, ಗುದಗೆ ಆಸ್ಪತ್ರೆ ಮಾರ್ಗವಾಗಿ ರಂಗಮಂದಿರದ ಆವರಣಕ್ಕೆ ಬಂದು ಸಮಾರೋಪಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.