ADVERTISEMENT

15 ಎಕರೆ ಜಾಗ ಕೊಟ್ಟರೆ ಟೆಕ್ಸ್‌ಟೈಲ್‌ ಪಾರ್ಕ್‌: ಸಚಿವ ಶಂಕರ ಪಾಟೀಲ

ಮುಖ್ಯಮಂತ್ರಿಯೊಂದಿಗೆ ಸಮಾಲೋಚನೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2022, 14:12 IST
Last Updated 6 ನವೆಂಬರ್ 2022, 14:12 IST
ಬೇಮಳಖೇಡ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಬೀದರ್‌ನ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡಬನಳ್ಳಿ ಗ್ರಾಮದ ಮಹಿಳೆಯ ಆರೋಗ್ಯ ವಿಚಾರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಕೆಎಸ್‌ಐಐಡಿಸಿ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ
ಬೇಮಳಖೇಡ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಬೀದರ್‌ನ ಬ್ರಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡಬನಳ್ಳಿ ಗ್ರಾಮದ ಮಹಿಳೆಯ ಆರೋಗ್ಯ ವಿಚಾರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹಾಗೂ ಕೆಎಸ್‌ಐಐಡಿಸಿ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ   

ಬೀದರ್‌: ‘ಜಿಲ್ಲಾಡಳಿತ 15 ಎಕರೆ ಜಾಗ ಕೊಟ್ಟರೆ ಟೆಕ್ಸ್‌ಟೈಲ್‌ ಪಾರ್ಕ್‌ ಆರಂಭಿಸಲು ಅನುಕೂಲವಾಗಲಿದೆ. ಜಾಗ ಗುರುತಿಸಲು ಈಗಾಗಲೇ ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ. ಈ ದಿಸೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

ನಗರದ ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ಉಡಬನಳ್ಳಿಯ ಮಹಿಳೆಯರ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

’ಕೆಡಿಪಿಯಲ್ಲಿ ಟೆಕ್ಸ್‌ಟೈಲ್‌ ಪಾರ್ಕ್‌ ಚರ್ಚಿಸಲಾಗುವುದು. ಅಧಿಕಾರಿಗಳಿಗೂ ಸ್ಪಷ್ಟ ನಿರ್ದೇಶನ ನೀಡಲಾಗುವುದು. ಟೆಕ್ಸ್‌ಟೈಲ್‌ ಪಾರ್ಕ್‌ ಆರಂಭವಾದರೆ 15 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ‘ ಎಂದು ಹೇಳಿದರು.

ADVERTISEMENT

‘ಕೂಲಿಕಾರ್ಮಿಕರಿಗೆ ಉದ್ಯೋಗ ಲಭಿಸಿದರೆ ಜಿಲ್ಲೆಯ ಜನ ಕೂಲಿಗಾಗಿ ಬೇರೆ ಕಡೆಗೆ ಹೋಗುವ ಅವಶ್ಯಕತೆ ಇಲ್ಲ. ಜಿಲ್ಲೆಯಲ್ಲೇ ಉದ್ಯೋಗ ಸೃಷ್ಟಿಸಬೇಕಿದೆ. ಎನ್‌ಆರ್‌ಜಿಯಲ್ಲಿ ಕಾರ್ಯಕ್ರಮ ಕೈಗೊಳ್ಳಲು ಅವಕಾಶ ಇದೆ. ಪಂಚಾಯಿತಿ ಮಟ್ಟದಲ್ಲೇ ಕೆಲಸ ಕೈಗೊಳ್ಳಬಹುದಾಗಿದೆ’ ಎಂದರು.

ಕೆಎಸ್‌ಐಐಡಿಸಿ ಅಧ್ಯಕ್ಷ ಶೈಲೇಂದ್ರ ಬೆಲ್ದಾಳೆ, ಬುಡಾ ಅಧ್ಯಕ್ಷ ಬಾಬು ವಾಲಿ, ನಾರಂಜಾ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಡಿ.ಕೆ.ಸಿದ್ರಾಮ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು, ಜಿಲ್ಲಾ ಆರೋಗ್ಯಾಧಿಕಾರಿ ರತಿಕಾಂತ ಸ್ವಾಮಿ, ಬ್ರಿಮ್ಸ್ ನೀರ್ದೇಶಕ ಶಿವಕುಮಾರ ಶೆಟಕಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.