ADVERTISEMENT

ಪತ್ರಿಕಾ ಭವನ ಉದ್ಘಾಟನೆ: ಯಡಿಯೂರಪ್ಪಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 14 ಮೇ 2022, 14:11 IST
Last Updated 14 ಮೇ 2022, 14:11 IST
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಬೀದರ್‍ನ ಪತ್ರಿಕಾ ಭವನದ ಉದ್ಘಾಟನಾ ಸಮಾರಂಭಕ್ಕೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದರು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಬೀದರ್‍ನ ಪತ್ರಿಕಾ ಭವನದ ಉದ್ಘಾಟನಾ ಸಮಾರಂಭಕ್ಕೆ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಿದರು   

ಬೀದರ್: ಇಲ್ಲಿಯ ಆನಂದನಗರದಲ್ಲಿ ನಿರ್ಮಿಸಲಾದ ನೂತನ ಪತ್ರಿಕಾ ಭವನದ ಉದ್ಘಾಟನಾ ಸಮಾರಂಭಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಹ್ವಾನಿಸಿದರು.


ಬೆಂಗಳೂರಿನಲ್ಲಿ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿಯಾಗಿದ್ದಾಗ ಅವರು ಭವನಕ್ಕೆ ರೂ. 25 ಲಕ್ಷ ವಿಶೇಷ ಅನುದಾನ ನೀಡಿದ್ದನ್ನು ಸ್ಮರಿಸಿದರು.
ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭರವಸೆ ನೀಡಿದರು.


ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಶ್ರೀನಿವಾಸ ಚೌಧರಿ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಸದಸ್ಯ ದೀಪಕ್ ಮನ್ನಳ್ಳಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.