ಬೀದರ್: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಸರ್ಕಾರ ವಿದ್ಯಾರ್ಥಿ ವೇತನಕ್ಕೆ ₹2.5 ಲಕ್ಷದ ಆದಾಯ ಮಿತಿ ಹಾಕಿರುವುದಕ್ಕೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‍ಎಫ್‍ಐ) ವಿರೋಧ ವ್ಯಕ್ತಪಡಿಸಿದೆ.
ಆದಾಯ ಮಿತಿಯ ಕಾರಣ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಕರ್ಯಗಳಿಂದ ವಂಚಿತರಾಗಲಿದ್ದಾರೆ. ಸಾಮಾಜಿಕ, ಆರ್ಥಿಕ ಹಿಂದುಳಿಯುವಿಕೆ ಹಾಗೂ ಜೀವನ ನಿರ್ವವಣೆ ವೆಚ್ಚವನ್ನು ವಿದ್ಯಾರ್ಥಿ ವೇತನಕ್ಕೆ ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೋಡಗೆ ಒತ್ತಾಯಿಸಿದ್ದಾರೆ.
ಅಲ್ಪಸಂಖ್ಯಾತರಿಗೆ ನೀಡುತ್ತಿದ್ದ ಫೆಲೋಶಿಪ್ ಹಣದಲ್ಲಿ ಶೇ 70 ರಷ್ಟು ಕಡಿತ ಮಾಡಿದ ಬೆನ್ನಲ್ಲೇ, ವಿದ್ಯಾರ್ಥಿ ವೇತನಕ್ಕೆ ಆದಾಯ ಮಿತಿ ಹಾಕಲಾಗಿದೆ. ಆದಾಯ ಮಿತಿಯನ್ನು ಕೂಡಲೇ ಕೈಬಿಡದಿದ್ದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.