ADVERTISEMENT

‘ಇತಿಹಾಸ ತಿರುಚುವ ಕೆಲಸ ನಿಲ್ಲಲ್ಲಿ’; ಶಾಸಕ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 2:14 IST
Last Updated 16 ಆಗಸ್ಟ್ 2021, 2:14 IST
ಭಾಲ್ಕಿಯ ಪುರಭವನದಲ್ಲಿ ಭಾನುವಾರ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಶಾಸಕ ಈಶ್ವರ ಖಂಡ್ರೆ ಮಾತನಾಡಿದರು
ಭಾಲ್ಕಿಯ ಪುರಭವನದಲ್ಲಿ ಭಾನುವಾರ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಸ್ವಾತಂತ್ರೋತ್ಸವ ಸಮಾರಂಭದಲ್ಲಿ ಶಾಸಕ ಈಶ್ವರ ಖಂಡ್ರೆ ಮಾತನಾಡಿದರು   

ಭಾಲ್ಕಿ: ಕೆಲ ಪಟ್ಟಭದ್ರ ಹಿತಾಸಕ್ತಿ ಯುಳ್ಳವರು ಇತಿಹಾಸ ತಿರುಚುವ ಕಾರ್ಯ ಮಾಡುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ಕೊಡಬಾರದು ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದರು.

ಪಟ್ಟಣದ ಪುರಭವನದಲ್ಲಿ ಭಾನುವಾರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 75ನೇ ಸ್ವಾತಂತ್ರೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆಲ ಜನರು ಗಾಂಧಿ, ನೆಹರು ಸೇರಿದಂತೆ ಹಲವು ದೇಶಭಕ್ತರ ಬಗ್ಗೆ ಅಪಪ್ರಚಾರಕ್ಕೆ ಇಳಿದಿದ್ದಾರೆ. ಸ್ವಾತಂತ್ರ್ಯ ತಂದುಕೊಟ್ಟವರ ಬಗ್ಗೆ ತಿಳಿವಳಿಕೆ ಇಲ್ಲದ ಜನರು ಇತಿಹಾಸ ತಿರುಚುವ ಕಾರ್ಯ ಮಾಡುತ್ತಿದ್ದಾರೆ ಎಂದರು.

ADVERTISEMENT

ಶಿಕ್ಷಣ ಇಲಾಖೆಯವರು ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವ ಕಾರ್ಯ ಮಾಡಬೇಕಿದೆ. ಸ್ವಾತಂತ್ರ್ಯ ಹೋರಾಟಗಾರರ ಕಿರು ಪುಸ್ತಕ ಬಿಡುಗಡೆ ಮಾಡಿ, ವಿದ್ಯಾರ್ಥಿಗಳಿಗೆ ಇದರ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ, ಅವರಿಗೆ ಪ್ರಬಂಧ ಸ್ಪರ್ಧೆ, ಭಾಷಣ ಸ್ಪರ್ಧೆ ಏರ್ಪಡಿಸಿ ಭಾವೈಕ್ಯ ಮೂಡಿಸುವ ಕಾರ್ಯ ಮಾಡಬೇಕು ಎಂದರು.

ಕೊರೊನಾ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ನಾವೆಲ್ಲರೂ ಜಾಗೃತರಾಗಿರಬೇಕು. ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿದರು. ಪುರಸಭೆ ಅಧ್ಯಕ್ಷ ಬಸವರಾಜ ವಂಕೆ, ಉಪಾಧ್ಯಕ್ಷೆ ರಾಜೇಶ್ವರಿ ರಾಜಕುಮಾರ ಮೋರೆ, ಮುಖ್ಯಾಧಿಕಾರಿ ಶಿವರಾಜ ರಾಠೋಡ, ಡಿವೈಎಸ್‌ಪಿ ದೇವರಾಜ ಬಿ., ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ, ಪುರಸಭೆ ಸದಸ್ಯ ವಿಜಯಕುಮಾರ ರಾಜಭವನ, ರಾಜಕುಮಾರ ವಂಕೆ, ಶಂಭುಲಿಂಗ ಸ್ವಾಮಿ, ಕ್ಷೇತ್ರ ಸಮನ್ವಯಾಧಿಕಾರಿ ಮನೋಹರ ಹೊಳಕರ್‌, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸೂರ್ಯಕಾಂತ ಇದ್ದರು.

ತಹಶೀಲ್ದಾರ್‌ ಕೀರ್ತಿ ಚಾಲಕ್ ಸ್ವಾಗತಿಸಿ, ದೀಪಕ ನಿರೂಪಿಸಿದರು. ಬಿಇಒ ಹಣಮಂತರಾಯ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.