ADVERTISEMENT

ಇಂದಿರಾ ಪುಣ್ಯತಿಥಿ, ಪಟೇಲ್ ಜಯಂತಿ

ಬೀದರ್ ಜಿಲ್ಲಾ ಕಾಂಗ್ರೆಸ್ ಕಚೇರಿ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2020, 14:01 IST
Last Updated 31 ಅಕ್ಟೋಬರ್ 2020, 14:01 IST
ಬೀದರ್‌ನ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಶನಿವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಆಚರಿಸಲಾಯಿತು
ಬೀದರ್‌ನ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಶನಿವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಆಚರಿಸಲಾಯಿತು   

ಬೀದರ್: ಇಲ್ಲಿಯ ಶಿವನಗರದಲ್ಲಿ ಇರುವ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಶನಿವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪುಣ್ಯತಿಥಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜಯಂತಿ ಆಚರಿಸಲಾಯಿತು.

ಇಂದಿರಾ ಗಾಂಧಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ಗೌರವ ಸಮರ್ಪಿಸಲಾಯಿತು.

ದೇಶಕ್ಕೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆ ಹಿರಿದಾಗಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ವೆಂಕಟರಾವ್ ಶಿಂಧೆ ಹೇಳಿದರು.

ADVERTISEMENT

ಇಂದಿರಾ ಗಾಂಧಿ ಅವರು ದೇಶದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದರು. ಬಡತನ ನಿರ್ಮೂಲನೆಗೆ ಅವಿರತ ಶ್ರಮಿಸಿದ್ದರು. ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬಿ, ಸಾಧನೆಗೆ ಪ್ರೇರೇಪಿಸಿದ್ದರು ಎಂದು ಸ್ಮರಿಸಿದರು.

ಇಂದಿರಾ ಗಾಂಧಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆದರ್ಶ ತತ್ವಗಳನ್ನು ಎಲ್ಲರೂ ಪಾಲಿಸಬೇಕು ಎಂದು ಮಾಜಿ ಸಂಸದ ನರಸಿಂಗರಾವ್ ಸೂರ್ಯವಂಶಿ ಹೇಳಿದರು.

ಪಕ್ಷದ ಜಿಲ್ಲಾ ಘಟಕದ ವಕ್ತಾರ ರಾಜಶೇಖರ ಪಾಟೀಲ ಅಷ್ಟೂರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಅಮೃತರಾವ್ ಚಿಮಕೋಡೆ, ಶಿವರಾಜ ಹಾಸನಕರ್, ರೋಹಿದಾಸ ಘೋಡೆ, ಬಿಡಿಎ ಮಾಜಿ ಅಧ್ಯಕ್ಷ ಸಂಜಯ್ ಜಾಗೀರದಾರ್, ಕಾಂಗ್ರೆಸ್ ಸೇವಾ ದಳದ ಅಧ್ಯಕ್ಷ ಅಬ್ದುಲ್ ಸತ್ತಾರ್, ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಡಿ.ಕೆ. ಸಂಜುಕುಮಾರ, ಪರ್ವೇಜ್ ಕಮಲ್, ಸುನೀಲ್ ಬಚ್ಚನ್, ರಾಜಕುಮಾರ, ಲತಾ ರಾಠೋಡ್, ಜಾನ್ ವೆಸ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.