ADVERTISEMENT

ಕಲ್ಯಾಣ ಕರ್ನಾಟಕದಲ್ಲಿ ಕೈಗಾರಿಕೆ: ಸಚಿವರಿಂದ ಸಕಾರಾತ್ಮಕ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 12:47 IST
Last Updated 24 ಜುಲೈ 2021, 12:47 IST
ನವದೆಹಲಿಯಲ್ಲಿ ಕಲ್ಯಾಣ ಕರ್ನಾಟಕದ ಕೃಷಿಕ ಸಮಾಜ ಮುಖಂಡರು ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರಿಗೆ ಪುಷ್ಪಗುಚ್ಛ ನೀಡಿ ಶುಭ ಕೋರಿದರು
ನವದೆಹಲಿಯಲ್ಲಿ ಕಲ್ಯಾಣ ಕರ್ನಾಟಕದ ಕೃಷಿಕ ಸಮಾಜ ಮುಖಂಡರು ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಅವರಿಗೆ ಪುಷ್ಪಗುಚ್ಛ ನೀಡಿ ಶುಭ ಕೋರಿದರು   

ಬೀದರ್: ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೊಸ ರಾಸಾಯನಿಕ ಹಾಗೂ ರಸಗೊಬ್ಬರ ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎನ್ನುವ ಬೇಡಿಕೆಗೆ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಭಗವಂತ ಖೂಬಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಭಾರತ ಕೃಷಿಕ ಸಮಾಜದ ಆಡಳಿತ ಮಂಡಳಿ ಸದಸ್ಯ ಶಾಂತಕುಮಾರ ಮುದಾಳೆ ತಿಳಿಸಿದ್ದಾರೆ.

ಅಧಿಕಾರ ವಹಿಸಿಕೊಂಡ ಪ್ರಯುಕ್ತ ನವದೆಹಲಿಯಲ್ಲಿ ನಿಯೋಗದಲ್ಲಿ ಅವರಿಗೆ ಶುಭ ಕೋರಿ, ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸುವ ದಿಸೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ಕೊಡಲು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಖೂಬಾ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಬೀದರ್ ಲೋಕಸಭಾ ಕ್ಷೇತ್ರ, ಕಲ್ಯಾಣ ಕರ್ನಾಟಕ ಹಾಗೂ ರಾಜ್ಯಕ್ಕೆ ಮಹತ್ವದ ಕೊಡುಗೆಗಳನ್ನು ಕೊಡಲಿದ್ದಾರೆ ಎಂದು ಕೃಷಿಕ ಸಮಾಜದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸಿದ್ರಾಮಪ್ಪ ಪಾಟೀಲ ದಂಗಾಪುರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಮುಖಂಡ ಬಸವರಾಜ ಮಾಡಗಿ ಇದ್ದರು. ನಂತರ ನಿಯೋಗದ ಸದಸ್ಯರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಶುಭ ಕೋರಿದರು. ಕೃಷಿ ಉತ್ಪನ್ನಗಳ ಬೆಂಬಲ ಬೆಲೆ ಹೆಚ್ಚಳಕ್ಕೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.