ADVERTISEMENT

ಲಸಿಕೆ ನಂತರ ತರಗತಿ ಆರಂಭಕ್ಕೆ ಒತ್ತಾಯ

ಎಐಡಿಎಸ್‍ಒ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 26 ಜುಲೈ 2021, 15:32 IST
Last Updated 26 ಜುಲೈ 2021, 15:32 IST
ಬೀದರ್‌ನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಎದುರು ಸೋಮವಾರ ಎಐಡಿಎಸ್‍ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು
ಬೀದರ್‌ನ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಎದುರು ಸೋಮವಾರ ಎಐಡಿಎಸ್‍ಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು   

ಬೀದರ್: ಕೋವಿಡ್ ಲಸಿಕೆಯ ಎರಡೂ ಡೋಸ್‍ಗಳನ್ನು ಕೊಟ್ಟ ನಂತರವೇ ಪದವಿ ಆಫ್‍ಲೈನ್ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇ ಷನ್ (ಎಐಡಿಎಸ್‍ಒ) ಕಾರ್ಯಕರ್ತರು ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ದ್ವಿತೀಯ ಪಿಯುಸಿಯಂತೆ ಡಿಪ್ಲೊಮಾ 1,3 ಹಾಗೂ 5ನೇ ಸೆಮಿಸ್ಟರ್ ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂದು ಬೇಡಿಕೆ ಮಂಡಿಸಿದರು.

ಎಐಡಿಎಸ್‍ಒ ಜಿಲ್ಲಾ ಸಂಚಾಲಕ ಹಣಮಂತ ಎಸ್.ಎಚ್. ಮಾತನಾಡಿ, ವಿಜಯಪುರ ಮಹಿಳಾ ವಿಶ್ವವಿದ್ಯಾಲ ಯವು ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಹಿಂದಿನ 1 ಮತ್ತು 3ನೇ ಸೆಮಿಸ್ಟರ್ ಪರೀಕ್ಷೆ ಮಾತ್ರ ನಡೆಸಲಿದೆ. ಮುಂದಿನ 2 ಮತ್ತು 4ನೇ ಸಮಿಸ್ಟರ್‌ಗಳಿಗೆ ಆಂತರಿಕ ಮೌಲ್ಯಮಾಪನ ಆಧಾರದಲ್ಲಿ ತೇರ್ಗಡೆಗೊಳಿಸುವುದಾಗಿ ವಿಜಯಪುರ ಮಹಿಳಾ ವಿಶ್ವವಿದ್ಯಾಲಯ ಪ್ರಕಟಿಸಿದೆ. ಇದು, ವಿದ್ಯಾರ್ಥಿಗಳ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಸಮಿತಿ ಸದಸ್ಯ ಲಕ್ಷ್ಮಣ ಪಿ. ಮಚಕೂರೆ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.