ADVERTISEMENT

ಕಾಂಗ್ರೆಸ್ ಕಾರ್ಯಕರ್ತರ ಸಭೆ ಸ್ಥಳ ಬದಲು

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 13:41 IST
Last Updated 4 ನವೆಂಬರ್ 2020, 13:41 IST

ಬೀದರ್: ನಗರದಲ್ಲಿ ಗುರುವಾರ (ನ.5) ನಡೆಯಲಿರುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಸ್ಥಳ ಬದಲಾವಣೆ ಮಾಡಲಾಗಿದೆ.

ಸಭೆ ಬೆಳಿಗ್ಗೆ 11ಕ್ಕೆ ಅಕ್ಕ ಮಹಾದೇವಿ ಕಾಲೇಜು ಬದಲು ಝೀರಾ ಫಂಕ್ಷನ್ ಹಾಲ್‍ನಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಶಾಸಕರಾದ ರಾಜಶೇಖರ ಪಾಟೀಲ ಹುಮನಾಬಾದ್, ರಹೀಂಖಾನ್, ವಿಧಾನ ಪರಿಷತ್ ಸದಸ್ಯರಾದ ವಿಜಯಸಿಂಗ್, ಅರವಿಂದಕುಮಾರ ಅರಳಿ, ಡಾ. ಚಂದ್ರಶೇಖರ ಪಾಟೀಲ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಸಭೆಯಲ್ಲಿ ಜಿಲ್ಲೆಯಲ್ಲಿ ವಸತಿ ಯೋಜನೆ ಫಲಾನುಭವಿಗಳ ಅನುದಾನಕ್ಕೆ ತಡೆ ಒಡ್ಡಿರುವ ಕುರಿತು ಚರ್ಚೆ ನಡೆಯಲಿದೆ. ಸಭೆಯ ನಂತರ ಅನುದಾನ ಬಿಡುಗಡೆಗೆ ಒತ್ತಾಯಿಸಿ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.