ಬೀದರ್: ‘ಪ್ರಜಾವಾಣಿ’, ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಜ. 17ರಂದು (ಬುಧವಾರ) ಬೆಳಿಗ್ಗೆ 10ಕ್ಕೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಸಮೀಪದ ಕರ್ನಾಟಕ ಸಾಹಿತ್ಯ ಸಂಘದ ಸಭಾಂಗಣದಲ್ಲಿ ಪತ್ರಿಕಾ ವಿತರಕರಿಗೆ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸುವ ವಿಮೆ ಯೋಜನೆಯ ಉಚಿತ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಕಾರ್ಮಿಕ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀಹರಿ ದೇಶಪಾಂಡೆ ನೋಂದಣಿಗೆ ಚಾಲನೆ ನೀಡುವರು.ಜಿಲ್ಲೆಯ ಎಲ್ಲ ಪತ್ರಿಕಾ ವಿತರಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ನೋಂದಣಿಗೆ ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ಫೋಟೊ, ಆಧಾರ್‌ಗೆ ಜೋಡಣೆಯಾದ ಸಂಖ್ಯೆಯ ಮೊಬೈಲ್‌ನೊಂದಿಗೆ ಹಾಜರಾಗಬೇಕು. ಜಿಲ್ಲೆಯ ಎಲ್ಲ ಪತ್ರಿಕಾ ವಿತರಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕೆಂದು ಕೋರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.