ಬೀದರ್‌ನಲ್ಲಿ ಯೋಗ ದಿನಾಚರಣೆ
ಬೀದರ್: ನಗರದ ಬಹಮನಿ ಕೋಟೆ ಆವರಣದಲ್ಲಿ ಶನಿವಾರ ಬೆಳಿಗ್ಗೆ 11ನೇ ಅಂತರರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.
ಜಿಲ್ಲಾಡಳಿತ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಯಿಙದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ನೂರಾರು ಜನ ಏಕಕಾಲಕ್ಕೆ ಯೋಗದ ವಿವಿಧ ಆಸನಗಳನ್ನು ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಡಾ. ಗಿರೀಶ ಬದೋಲೆ, ಎಸ್ಪಿ ಪ್ರದೀಪ್ ಗುಂಟಿ, ಹೆಚ್ಚುವರಿ ಎಸ್ಪಿ ಚಂದ್ರಕಾಂತ ಪೂಜಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ. ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.