ಆರ್‌ಸಿಬಿ ಗೆದ್ದ ನಂತರ ಬೀದರ್‌ನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ದಲ್ಲಿ ಮಂಗಳವಾರ ಮಧ್ಯರಾತ್ರಿ ನೂರಾರು ಜನ ವಿಜಯೋತ್ಸವ ಆಚರಿಸಿದರು
ಬೀದರ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಗೆಲುವು ದಾಖಲಿಸಿದ ನಂತರ ನೂರಾರು ಜನ ಮಧ್ಯರಾತ್ರಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಸೇರಿ ವಿಜಯೋತ್ಸವ ಆಚರಿಸಿದರು.
ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಕೇಕೆ, ಶಿಳ್ಳೆ ಹಾಕಿ ಸಂಭ್ರಮಿಸಿ ಕುಣಿದು ಕುಪ್ಪಳಿಸಿದರು. ನಗರದ ಬಹುತೇಕ ಬಡಾವಣೆಗಳಲ್ಲಿ ಜನ ಜಮಾಯಿಸಿ ಪಟಾಕಿ ಸಿಡಿಸಿದರು. ಈ ಸಲ ಕಪ್ ನಮ್ದೆ ಎಂದು ಘೋಷಣೆ ಹಾಕಿದರು.
ಆರ್‌ಸಿಬಿ ಗೆದ್ದ ನಂತರ ಬೀದರ್‌ನ ಡಾ.ಬಿ.ಆರ್.ಅಂಬೇಡ್ಕರ್ ವೃತ್ತ ದಲ್ಲಿ ಮಂಗಳವಾರ ಮಧ್ಯರಾತ್ರಿ ನೂರಾರು ಜನ ವಿಜಯೋತ್ಸವ ಆಚರಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.