ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ಖಂಡ್ರೆ ದೂರು

ಹೆದ್ದಾರಿ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 5:05 IST
Last Updated 20 ಡಿಸೆಂಬರ್ 2020, 5:05 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಬೀದರ್: ಬೀದರ್–ಔರಾದ್‌ ಹಾಗೂ ಬೀದರ್‌–ಹುಮನಾಬಾದ್‌ ಮಧ್ಯದ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದ್ದನ್ನು ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪ್ರದರ್ಶಿಸಿ ಬಿಜೆಪಿ ಮುಖಂಡರು ಪ್ರಚಾರ ಮಾಡಿ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.

ಡಿಸೆಂಬರ್ 30ರವರೆಗೂ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇದೆ. ಬಿಜೆಪಿ ಮುಖಂಡರ ಭಾವಚಿತ್ರಗಳಿರುವ ಫಲಕವನ್ನು ಸಂಸದ ಭಗವಂತ ಖೂಬಾ ಅವರು ಹಾಕಿಸಿದ್ದಾರೆ. ನೀತಿ ಸಂಹಿತೆ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಬೇಕು. ನ್ಯಾಯ ಸಮ್ಮತ ಚುನಾವಣೆ ನಡೆಸಲು ಎಲ್ಲ ಫಲಕಗಳನ್ನು ತೆರವುಗೊಳಿಸಬೇಕು ಎಂದು ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

‘ಈಶ್ವರ್ ಖಂಡ್ರೆಗೆ ಬೇರೆ ಕೆಲಸ ಇಲ್ಲ’

ADVERTISEMENT

ಬೀದರ್‌: ‘ನಗರದಲ್ಲಿ ನಾನು ಯಾವುದೇ ಫಲಕ ಹಾಕಿಸಿಲ್ಲ. ನಮ್ಮ ಪಕ್ಷದ ಕಾರ್ಯಕರ್ತರು ಹೆದ್ದಾರಿ ನಿರ್ಮಾಣದ ಶಂಕುಸ್ಥಾಪನೆಯ ಫಲಕ ಹಾಕಿದ್ದಾರೆ. ಖಂಡ್ರೆ ಅವರು ಕ್ಷುಲ್ಲಕ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ’ ಎಂದು ಸಂಸದ ಭಗವಂತ ಖೂಬಾ ಟೀಕಿಸಿದರು.

ವಿಡಿಯೊ ಕಾನ್ಫರೆನ್ಸ್‌ ಮೂಲಕ ಕೇಂದ್ರ ಸಾರಿಗೆ ಮತ್ತು ಹೆದ್ದಾರಿಗಳ ಕಾಮಗಾರಿಗೆ ಸಚಿವ ನಿತಿನ್‌ ಗಡ್ಕರಿ ಶಂಕುಸ್ಥಾಪನೆ ನೆರೆವೇರಿಸಿದ್ದನ್ನು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಳವಡಿಸಿದ್ದ ಟಿವಿಯಲ್ಲಿ ವೀಕ್ಷಿಸಿದ ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದರು.

‘ಖಂಡ್ರೆ ಅವರು ಕ್ಷುಲ್ಲಕ ಆರೋಪ ಮಾಡುವ ಮೂಲಕ ಅಭಿವೃದ್ಧಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.