ADVERTISEMENT

ಬಿಜೆಪಿಯಿಂದ ಅನ್ಯಾಯ ಆಗಿದೆ: ಖೂಬಾ

ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 2:01 IST
Last Updated 9 ಏಪ್ರಿಲ್ 2021, 2:01 IST
ಬಸವಕಲ್ಯಾಣ ತಾಲ್ಲೂಕಿನ ಭೋಸಗಾದಲ್ಲಿ ಗುರುವಾರ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಮಾತನಾಡಿದರು
ಬಸವಕಲ್ಯಾಣ ತಾಲ್ಲೂಕಿನ ಭೋಸಗಾದಲ್ಲಿ ಗುರುವಾರ ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಮಾತನಾಡಿದರು   

ಬಸವಕಲ್ಯಾಣ: ‘ಬಿಜೆಪಿಯಿಂದ ನನಗೆ ಟಿಕೆಟ್ ನೀಡದೆ ಅನ್ಯಾಯ ಮಾಡಿದ್ದರಿಂದ ಪಕ್ಷೇತರನಾಗಿ ಸ್ಪರ್ಧಿಸಿದ್ದೇನೆ’ ಎಂದು ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು.

ತಾಲ್ಲೂಕಿನ ಭೋಸಗಾದಲ್ಲಿ ಗುರುವಾರ ಆಯೋಜಿಸಿದ್ದ ಉಪ ಚುನಾವಣೆಯ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ಕ್ಷೇತ್ರದ ಹೊರಗಿನವರಿಗೆ ಟಿಕೆಟ್ ನೀಡಿದ್ದರಿಂದ ಸ್ಥಳೀಯ ಸ್ವಾಭಿಮಾನಿ ಬಳಗದವರು ನನಗೆ ಬೆಂಬಲ ಸೂಚಿಸಿದ್ದಾರೆ. ತಾಲ್ಲೂಕಿನ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಪ್ರಚಾರ ನಡೆಸುತ್ತಿದ್ದು, ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ದೊರೆತಿದೆ’ ಎಂದರು.

ADVERTISEMENT

‘ಈ ಚುನಾವಣೆ ಸ್ಥಳೀಯರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಆದ್ದರಿಂದ ಏಪ್ರಿಲ್ 17ರಂದು ನನ್ನ ಚುನಾವಣಾ ಚಿಹ್ನೆಯಾದ ನೇಗಿಲಿಗೆ ಮತ ನೀಡಿ ಗೆಲ್ಲಿಸಬೇಕು’ ಎಂದು ಕೋರಿದರು.

ಕಾಳಿದಾಸ ಜಾಧವ, ಸಂಜೀವ ಗಾಯಕವಾಡ, ಬಸವರಾಜ ಖೂಬಾ, ಧನರಾಜ ಫಡೆ ಪಾಲ್ಗೊಂಡಿದ್ದರು.

ಪ್ರಚಾರ ರಥಯಾತ್ರೆ: ಪಕ್ಷೇತರ ಅಭ್ಯರ್ಥಿ ಮಲ್ಲಿಕಾರ್ಜುನ ಖೂಬಾ ಅವರ ಉಪ ಚುನಾವಣೆಯ ಪ್ರಚಾರದ ರಥಗಳಿಗೆ ಗುರುವಾರ ಇಲ್ಲಿ ಚಾಲನೆ ನೀಡಲಾಯಿತು. ಕ್ಷೇತ್ರದ ಎಲ್ಲ ಗ್ರಾಮಗಳಿಗೂ ಪ್ರಚಾರ ರಥಗಳು ಸಂಚರಿಸಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.