ಬೀದರ್: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ಡಾ.ಬಾಬು ಜಗಜೀವನರಾಂ ಅವರ 114ನೇ ಜನ್ಮದಿನ ಆಚರಿಸಲಾಯಿತು.
ಕರ್ನಾಟಕ ಕಾಲೇಜು ಹತ್ತಿರದ ಡಾ.ಬಾಬು ಜಗಜೀವನರಾಂ ಅವರ ಪುತ್ಥಳಿಗೆ ರಾಮಚಂದ್ರನ್ ಆರ್., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಹೀರಾ ನಸೀಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಲಕ್ಷ್ಮಿ ಖೋಬಾಳಕರ್ ಪುಷ್ಪ ನಮನ ಸಲ್ಲಿಸಿದರು.
ಮುಖಂಡರಾದ ಮಾರುತಿ ಬೌದ್ಧೆ, ರಾಜು ಕಾಡ್ಯಾಳ, ಚಂದ್ರಕಾಂತ ಹಿಪ್ಪಳಗಾಂವ್ ಮೊದಲಾದವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.