
ಇಂದ್ರಮ್ಮಾ ಶಾಮರಾವ್
ಬೀದರ್: ಔರಾದ್ ತಾಲ್ಲೂಕಿನ ಜೋಜನಾ ಗ್ರಾಮದ ಇಂದ್ರಮ್ಮಾ ಶಾಮರಾವ್ ಅವರು ಕರ್ನಾಟಕ ಜಾನಪದ ಅಕಾಡೆಮಿಯ 2025ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₹25 ಸಾವಿರ ನಗದು, ಪ್ರಮಾಣ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ.
ಇಂದ್ರಮ್ಮಾ (77) ಅವರು ಹಂತಿ ಪದ, ಮೊಹರಂ ಪದ, ಬುಲಾಯಿ ಪದಗಳ ಗಾಯನದಿಂದ ರಾಜ್ಯ ಹಾಗೂ ನೆರೆಯ ರಾಜ್ಯಗಳಲ್ಲಿ ಹೆಸರು ಮಾಡಿದ್ದಾರೆ. ಮೂರು ದಶಕಗಳಿಂದ ಜಾನಪದ ಗೀತೆಗಳನ್ನು ಹಾಡುತ್ತಿದ್ದಾರೆ. ಅನೇಕ ಸಭೆ, ಸಮಾರಂಭ ಹಾಗೂ ಉತ್ಸವಗಳಲ್ಲಿ ಕಾರ್ಯಕ್ರಮ ಪ್ರಸ್ತುತಪಡಿಸಿದ್ದಾರೆ.
‘ಇಂದ್ರಮ್ಮಾ ಅವರು ಜಾನಪದ ಹಾಡುಗಳ ಮೂಲಕ ಅನೇಕ ಜನಪದ ಗೀತೆಗಳನ್ನು ಜೀವಂತವಾಗಿ ಇಟ್ಟಿದ್ದಾರೆ. ಅವರ ಕಲಾಸಕ್ತಿ ನೋಡಿ, ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಸಂತಸದ ವಿಷಯ’ ಎಂದು ವಿಜಯಕುಮಾರ ಸೋನಾರೆ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.