ಚಿಟ್ಟಾ/ಘೋಡಂಪಳ್ಳಿ(ಜನವಾಡ): ಜಿಲ್ಲೆಯಲ್ಲಿ ಇರುವ ಅಪಾಯಕಾರಿ ತೆರೆದ ಬಾವಿಗಳನ್ನು ಕೂಡಲೇ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೂಡ್ಸ್ ವಾಹನ ಬಿದ್ದು ಇಬ್ಬರು ಮೃತಪಟ್ಟು, ಐವರು ಗಾಯಗೊಂಡಿದ್ದ ಬೀದರ್ ತಾಲ್ಲೂಕಿನ ಚಿಟ್ಟಾ ಸಮೀಪದ ರಸ್ತೆ ಬದಿಯ ತೆರೆದ ಬಾವಿಗೆ ಶುಕ್ರವಾರ ಭೇಟಿ ನೀಡಿ ಅವರು ಮಾತನಾಡಿದರು.
ಸಾರ್ವಜನಿಕರ ಜೀವದ ಸುರಕ್ಷತೆಗೆ ಪ್ರಾಮುಖ್ಯ ಕೊಡಬೇಕು ಎಂದು ತಿಳಿಸಿದರು.
ಬಳಿಕ ಘಟನೆಯಲ್ಲಿ ಮೃತಪಟ್ಟ ಘೋಡಂಪಳ್ಳಿ ಗ್ರಾಮದ ಲಕ್ಷ್ಮಿಕಾಂತ ಹಾಗೂ ರವಿ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.
ರಾಜ್ಯ ಸರ್ಕಾರದಿಂದ ಪರಿಹಾರ ದೊರಕಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಪೌರಾಡಳಿತ ಸಚಿವ ರಹೀಂಖಾನ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಮೃತರಾವ್ ಚಿಮಕೋಡೆ, ಬೀದರ್ ನಗರಸಭೆ ಅಧ್ಯಕ್ಷ ಮುಹಮ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.