ಬೀದರ್: ಜನಿವಾರ ಧರಿಸಿದ ಕಾರಣಕ್ಕಾಗಿ ಕೆ-ಸಿಇಟಿ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ಸಿಗದೆ ಪರೀಕ್ಷೆಯಿಂದ ವಂಚಿತನಾದ ನಗರದ ಚೌಬಾರ ನಿವಾಸಿ ಸುಚಿವ್ರತ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆಯವರು ಭಾನುವಾರ ಬೆಳಿಗ್ಗೆ ಭೇಟಿ ನೀಡಿ, ಸಾಂತ್ವನ ಹೇಳಿ ಧೈರ್ಯ ತುಂಬಿದರು.
ವಿದ್ಯಾರ್ಥಿ ಸುಚಿವ್ರತ್ ಹಾಗೂ ಪೋಷಕರೊಂದಿಗೆ ಮಾತನಾಡಿದ ಅವರು, ಒಂದುವೇಳೆ ಎಂಜಿನಿಯರಿಂಗ್ ಕೋರ್ಸ್ ಮಾಡುವುದಾದರೆ ನನ್ನ ಕಾಲೇಜಿನಲ್ಲೇ ಉಚಿತ ಪ್ರವೇಶ ಕೊಡಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.
ಪರೀಕ್ಷಾ ಕೇಂದ್ರದ ಸಿಬ್ಬಂದಿ ತಪ್ಪು ಮಾಡಿದ್ದಾರೆ. ಅದರಲ್ಲಿ ಎರಡು ಮಾತಿಲ್ಲ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.