ಜನವಾಡ: ‘ಅಂತರ್ಜಲ ಮಟ್ಟ ಹೆಚ್ಚಳಕ್ಕೆ ಎಲ್ಲರೂ ಮುಂದಾಗಬೇಕು’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ವತಿಯಿಂದ ಬೀದರ್ ತಾಲ್ಲೂಕಿನ ಬೆನಕನಳ್ಳಿಯಲ್ಲಿ ಶುಕ್ರವಾರ ನಡೆದ ವಿಶ್ವ ಜಲ ದಿನ ಹಾಗೂ ಕಾನೂನು ಅರಿವು- ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಮನೆ ಮನೆಗಳಲ್ಲೂ ಇಂಗು ಗುಂಡಿ, ಮಳೆ ನೀರು ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.
‘ನೀರು ಬಹಳ ಅಮೂಲ್ಯ. ಅದನ್ನು ಉಳಿಸಬೇಕು. ಮರ, ಗಿಡಗಳನ್ನು ಬೆಳೆಸುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು’ ಎಂದು ಹೇಳಿದರು.
‘ಸಾರ್ವಜನಿಕರು ಸಣ್ಣ, ಪುಟ್ಟ ವಾಜ್ಯಗಳನ್ನು ಗ್ರಾಮ ಮಟ್ಟದಲ್ಲೇ ಬಗೆಹರಿಸಿಕೊಳ್ಳಬೇಕು. ಗಂಭೀರ ಪ್ರಕರಣಗಳಿದ್ದರೆ ಮಾತ್ರ ನ್ಯಾಯಾಲಯದ ಬಾಗಿಲು ತಟ್ಟಬೇಕು’ ಎಂದು ಸಲಹೆ ಮಾಡಿದರು. ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ನಾಗೇಂದ್ರ ಬಿರಾದಾರ ಮಾತನಾಡಿದರು.
‘ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕಿರಣ ಪಾಟೀಲ, ವಕೀಲ ಕೃಷ್ಣಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಂಜೀವಕುಮಾರ ಶೇಳಕೆ, ಪಿಡಿಒ ಉಮೇಶ ಜಾಬಾ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ ಆಕಾಶ ಸಜ್ಜನಶೆಟ್ಟಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.