ADVERTISEMENT

ಉತ್ಪಾದನಾ ಘಟಕಗಳಿಂದ ಉದ್ಯೋಗ ಸೃಷ್ಟಿ: ಶರಣಬಸವ ಮಠಪತಿ

​ಪ್ರಜಾವಾಣಿ ವಾರ್ತೆ
Published 22 ಜೂನ್ 2022, 8:29 IST
Last Updated 22 ಜೂನ್ 2022, 8:29 IST
ಬೀದರ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಶರಣಬಸವ ಮಠಪತಿ ಉದ್ಘಾಟಿಸಿದರು
ಬೀದರ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಶರಣಬಸವ ಮಠಪತಿ ಉದ್ಘಾಟಿಸಿದರು   


ಬೀದರ್: ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಉತ್ಪಾದನಾ ಘಟಕಗಳ ಸ್ಥಾಪನೆಯಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ ಎಂದು ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಶರಣಬಸವ ಮಠಪತಿ ಹೇಳಿದರು.


ನಗರದಲ್ಲಿ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್)ದ ವತಿಯಿಂದ ಹಮ್ಮಿಕೊಳ್ಳಲಾದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಯಾವುದೇ ಉದ್ಯಮ ಆರಂಭಿಸುವ ಮುನ್ನ ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಲ್ಲಿ ಯಶಸ್ಸು ಗಳಿಸಲು ಸಾಧ್ಯವಿದೆ ಎಂದು ತಿಳಿಸಿದರು.

ADVERTISEMENT


ಸಿಡಾಕ್ ಜಂಟಿ ನಿರ್ದೇಶಕ ಜಿ.ಯು ಹುಡೇದ್, ಖಾದಿ ಮತ್ತು ಗ್ರಾಮೀಣ ಕೈಗಾರಿಕೆ ಉಪ ನಿರ್ದೇಶಕ ರಮೇಶ ಮಠಪತಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಪ್ರಕಾಶ, ಉಪನ್ಯಾಸಕ ಸೈಯದ್ ಅಶ್ಫಾಕ್ ಅಹಮ್ಮದ್, ಮಲ್ಲಪ್ಪ ಟಿ. ಮೇತ್ರೆ, ಸಾಯಿಬಣ್ಣ ಬ್ಯಾಳೋಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.