ADVERTISEMENT

ಭಾಲ್ಕಿ | ಪತ್ರಕರ್ತರದ್ದು ಸಂಕಷ್ಟದ ಬದುಕು: ಮೆಹಕರ್-ತಡೋಳಾದ ರಾಜೇಶ್ವರ ಶಿವಾಚಾರ್ಯ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 4:33 IST
Last Updated 22 ಜುಲೈ 2025, 4:33 IST
ಭಾಲ್ಕಿಯ ಭಾಲ್ಕೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮದಲ್ಲಿ ಮೆಹಕರ್, ತಡೋಳಾದ ರಾಜೇಶ್ವರ ಶಿವಾಚಾರ್ಯರು ಮಾತನಾಡಿದರು
ಭಾಲ್ಕಿಯ ಭಾಲ್ಕೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮದಲ್ಲಿ ಮೆಹಕರ್, ತಡೋಳಾದ ರಾಜೇಶ್ವರ ಶಿವಾಚಾರ್ಯರು ಮಾತನಾಡಿದರು   

ಭಾಲ್ಕಿ: ‘ಗ್ರಾಮೀಣ ಭಾಗದ ಪತ್ರಕರ್ತರು ಸಂಕಷ್ಟದ ನಡುವೆ ಬದುಕು ಸಾಗಿಸುತ್ತಿದ್ದಾರೆ’ ಎಂದು ಮೆಹಕರ್-ತಡೋಳಾದ ರಾಜೇಶ್ವರ ಶಿವಾಚಾರ್ಯ ಅಭಿಪ್ರಾಯಪಟ್ಟರು.

ಪಟ್ಟಣದ ಭಾಲ್ಕೇಶ್ವರ ಶಿಶು ವಿಹಾರ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಜಗದ್ಗುರು ರೇಣುಕಾಚಾರ್ಯ ಜನ ಕಲ್ಯಾಣ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಪತ್ರಕರ್ತರ ದಿನಾಚರಣೆ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

‘ಸರ್ಕಾರ ವಿವಿಧ ಯೋಜನೆ ಅನುಷ್ಠಾನಕ್ಕೆ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡುತ್ತದೆ. ಆದರೆ ಸಮಾಜದ ಸೇವೆಯಲ್ಲಿರುವ ಪತ್ರಕರ್ತರಿಗೆ ಯಾಕೆ ಸೌಲಭ್ಯ ಕಲ್ಪಿಸುತ್ತಿಲ್ಲ’ ಎಂದು ಪ್ರಶ್ನಿಸಿದರು.

ADVERTISEMENT

ಕಾರ್ಯಕ್ರಮ ಉದ್ಘಾಟಿಸಿದ ಯುವ ಮುಖಂಡ ಚೆನ್ನಬಸವಣ್ಣ ಬಳತೆ ಮಾತನಾಡಿ, ‘ಇಂದಿನ ಡಿಜಿಟಲ್ ಯುಗದಲ್ಲಿಯೂ ಮುದ್ರಣ ಮಾಧ್ಯಮ ವಸ್ತುನಿಷ್ಠ ಸುದ್ದಿಗಳನ್ನು ನೀಡುವಲ್ಲಿ ತನ್ನದೇ ಆದ ಗೌರವ, ಘನತೆ ಕಾಪಾಡಿಕೊಂಡಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಸಿದ್ರಾಮಯ್ಯ ಮಾತನಾಡಿದರು. ತಾಲ್ಲೂಕಿನಲ್ಲಿ ಸೇವೆ ಸಲ್ಲಿಸುತ್ತಿರುವ ಪತ್ರಕರ್ತರನ್ನು ಸನ್ಮಾನಿಸಲಾಯಿತು. ಪತ್ರಕರ್ತರ ತಾಲ್ಲೂಕು ಸಂಘದ ಅಧ್ಯಕ್ಷ ಜಯರಾಜ ದಾಬಶೆಟ್ಟೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಣಪತಿ ಬೋಚರೆ, ಸಂಸ್ಥೆಯ ನಿರ್ದೇಶಕರಾದ ಗುರಯ್ಯ ಸ್ವಾಮಿ, ವಿಜಯಕುಮಾರ ಭುಸಗುಂಡೆ, ಡಾ.ಪ್ರಭುಲಿಂಗ ಸ್ವಾಮಿ, ಸತೀಶ ಮಠ, ಬಾಲಾಜಿ ಬಿರಾದಾರ, ಸುನಿತಾ ಸಂಗೋಳಗೆ ಸೋಪಾನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.