ಅಜಯ್ ಹಿಲೋರಿ
ಬೀದರ್: ಕಲಬುರಗಿ ವಲಯ ಐಜಿಪಿ ಅಜಯ್ ಹಿಲೋರಿ ಅಧಿಕ ರಕ್ತದೊತ್ತಡದಿಂದ ನಗರದ ಖಾಸಗಿ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜನವರಿ 16ರಂದು ನಗರದ ಎಸ್.ಬಿ.ಐ. ಕಚೇರಿ ಎದುರು ನಡೆದ ದರೋಡೆ, ಗುಂಡಿನ ದಾಳಿ ಪ್ರಕರಣದ ನಂತರ ಅವರು ನಗರದಲ್ಲೇ ಬೀಡು ಬಿಟ್ಟಿದ್ದಾರೆ. ಆರೋಪಿಗಳ ಪತ್ತೆಗೆ ರಚಿಸಲಾಗಿರುವ ತನಿಖಾ ತಂಡಗಳಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ.
ಬುಧವಾರ ಅಧಿಕ ರಕ್ತದೊತ್ತಡದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆ್ಯಂಜಿಯೋಗ್ರಫಿ ಮಾಡಿ ಚಿಕಿತ್ಸೆ ನೀಡಲಾಗಿದೆ. ಗುರುವಾರ ಸಂಜೆ ಡಿಸ್‌ಚಾರ್ಜ್ ಮಾಡಲಾಗುವುದು ಎಂದು ಆಸ್ಪತ್ರೆಯ ಹಿರಿಯ ವೈದ್ಯ ಡಾ. ಚಂದ್ರಕಾಂತ ಗುದಗೆ ಪ್ರಜಾವಾಣಿಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.