ADVERTISEMENT

ವಿವಿಧೆಡೆ ಕಲ್ಯಾಣ ಕರ್ನಾಟಕ ಉತ್ಸವ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 15:11 IST
Last Updated 18 ಸೆಪ್ಟೆಂಬರ್ 2021, 15:11 IST

ಬೀದರ್: ನಗರದ ವಿವಿಧೆಡೆ ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.
ಗ್ಲೋಬಲ್ ಸೈನಿಕ ಅಕಾಡೆಮಿ: ಅಕಾಡೆಮಿಯ ಅಧ್ಯಕ್ಷ ನಿವೃತ್ತ ಕರ್ನಲ್ ಶರಣಪ್ಪ ಸಿಕೇನಪುರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಬಿ.ಎಸ್ ಧಾಲಿವಾಲ್ ಮಾತನಾಡಿದರು. ಮುಖ್ಯ ಶಿಕ್ಷಕ ಪೃಥ್ವಿರಾಜ, ಕಾರಂಜಿ ಸ್ವಾಮಿ ಇದ್ದರು.

ಎಂಬಿಇ ಸಂಸ್ಥೆ: ನಗರದ ಮಹಾತ್ಮ ಬೊಮ್ಮಗೊಂಡೇಶ್ವರ ಶಿಕ್ಷಣ ಸಂಸ್ಥೆ ಕಚೇರಿಯಲ್ಲಿ ಮಾತೋಶ್ರೀ ಅಹಿಲ್ಯಾಬಾಯಿ ಹೋಳ್ಕರ್ ಪ್ರೌಢಶಾಲೆ, ಏಕಲವ್ಯ ಹಿರಿಯ ಪ್ರಾಥಮಿಕ ಶಾಲೆ, ಕವಿರತ್ನ ಕಾಳಿದಾಸ ಪದವಿ ಕಾಲೇಜು, ಡಿ. ದೇವರಾಜ ಅರಸು ಶಿಕ್ಷಕರ ತರಬೇತಿ ಸಂಸ್ಥೆ ವತಿಯಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಿಸಲಾಯಿತು.

ADVERTISEMENT

ಸಂಸ್ಥೆಯ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಧ್ವಜಾರೋಹಣ ಮಾಡಿದರು. ಪ್ರಧಾನ ಕಾರ್ಯದರ್ಶಿ ಗೋವರ್ಧನ ರಾಠೋಡ್ ಮಾತನಾಡಿದರು. ಮುಖ್ಯ ಶಿಕ್ಷಕ ಸಲಾವುದ್ದಿನ್ ಅಧ್ಯಕ್ಷತೆ ವಹಿಸಿದ್ದರು.
ಪದವಿ ಕಾಲೇಜು ಪ್ರಾಚಾರ್ಯ ಪ್ರೊ. ಗಿರಿರಾವ್ ಕುಲಕರ್ಣಿ ಸ್ವಾಗತಿಸಿದರು. ಓಂಕಾರ ಮಾಶೆಟ್ಟಿ ನಿರೂಪಿಸಿದರು. ಡಿ.ಎಡ್. ಕಾಲೇಜು ಅಧೀಕ್ಷಕ ವೈಜಿನಾಥ ಬಿರಾದಾರ ವಂದಿಸಿದರು.

ರಾಣಿ ಕಿತ್ತೂರ ಚನ್ನಮ್ಮ ಹಿರಿಯ ಪ್ರಾಥಮಿಕ ಶಾಲೆ:

ರಾಣಿ ಕಿತ್ತೂರ ಚನ್ನಮ್ಮ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಪ್ರಭುರಾವ್ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಕಾರ್ಯದರ್ಶಿ ವಿ. ಸೋಮಣ್ಣ ಸದಸ್ಯ ಬಸವಣಪ್ಪ ನೇಳಗೆ, ಶಂಕರೆಪ್ಪ ಹೆಡಗಾಪೂರೆ ಇದ್ದರು.
ಶಾಲೆಯ ಮುಖ್ಯಶಿಕ್ಷಕಿ ಪಾರಮ್ಮ ಸ್ವಾಗತಿಸಿದರು, ಮಂದಾಕಿನಿ ಉಪ್ಪೆ ವಂದಿಸಿದರು, ಕಾರ್ಯಕ್ರಮದ ಸಂಗ್ರಾಮ ಚಾಮಾ ಶಿಕ್ಷಕರು ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.