ADVERTISEMENT

 ಬೀದರ್ | ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕಾರ್ಯಾಗಾರ ಸೆ. 3 ರಿಂದ

ಪೂರ್ವ ಭಾವಿ ಸಿದ್ಧತಾ ಸಭೆಯಲ್ಲಿ ಕೆ.ಸಿ. ವೀರಣ್ಣ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2022, 14:26 IST
Last Updated 26 ಆಗಸ್ಟ್ 2022, 14:26 IST
ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದ ಕಲ್ಯಾಣ ಕರ್ನಾಟಕ ಇತಿಹಾಸ, ಸಂಸ್ಕೃತಿ ಹಾಗೂ ಅಭಿವೃದ್ಧಿ ಕುರಿತ ಕಾರ್ಯಾಗಾರದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ. ವೀರಣ್ಣ ಮಾತನಾಡಿದರು
ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ನಡೆದ ಕಲ್ಯಾಣ ಕರ್ನಾಟಕ ಇತಿಹಾಸ, ಸಂಸ್ಕೃತಿ ಹಾಗೂ ಅಭಿವೃದ್ಧಿ ಕುರಿತ ಕಾರ್ಯಾಗಾರದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ. ವೀರಣ್ಣ ಮಾತನಾಡಿದರು   

ಕಮಠಾಣ (ಜನವಾಡ): ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಸೆ. 3 ಮತ್ತು 4 ರಂದು ಕಲ್ಯಾಣ ಕರ್ನಾಟಕ ಇತಿಹಾಸ, ಸಂಸ್ಕೃತಿ ಹಾಗೂ ಅಭಿವೃದ್ಧಿ ಕುರಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಕಾರ್ಯಾಗಾರದ ಪೂರ್ವ ಭಾವಿ ಸಿದ್ಧತಾ ಸಭೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿ ಕೆ.ಸಿ. ವೀರಣ್ಣ ಈ ವಿಷಯ ತಿಳಿಸಿದರು.

ಈ ಭಾಗದ ಇತಿಹಾಸವನ್ನು ಯುವ ಪೀಳಿಗೆಗೆ ತಿಳಿಸುವುದು ಅವಶ್ಯಕವಾಗಿದೆ. ಕಾರಣ ಕಲ್ಯಾಣ ಕರ್ನಾಟಕದ ಇತಿಹಾಸಕಾರರು, ವಿವಿಧ ವಿಶ್ವವಿದ್ಯಾಲಯಗಳ ಸಂಪನ್ಮೂಲ ವ್ಯಕ್ತಿಗಳು, ಕಾಲೇಜುಗಳ ಪ್ರಾಚಾರ್ಯರು ಭಾಗವಹಿಸಬೇಕು ಎಂದು ಹೇಳಿದರು.

ADVERTISEMENT

ಕಲ್ಯಾಣ ಕರ್ನಾಟಕ ಇತಿಹಾಸ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಸಮಿತಿಯ ಸದಸ್ಯ ಕಾರ್ಯದರ್ಶಿ ಲಕ್ಷ್ಮಣ ದಸ್ತಿ ಮಾತನಾಡಿ, ಈ ಭಾಗದ ಎಲ್ಲ ಜಿಲ್ಲೆಗಳಲ್ಲೂ ಕಾರ್ಯಾಗಾರ ಹಮ್ಮಿಕೊಳ್ಳುವ ಉದ್ದೇಶ ಇದೆ. ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಕಾರ್ಯಾಗಾರದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸ್ವಾತಂತ್ರ್ಯ ಹೋರಾಟಗಾರರ ಕುರಿತು 40ಕ್ಕೂ ಹೆಚ್ಚು ಲೇಖನಗಳು ಮಂಡನೆಯಾಗಲಿವೆ ಎಂದು ತಿಳಿಸಿದರು.

1724 ರಿಂದ 1948ರ ವರೆಗಿನ ಆಡಳಿತ, ರಾಜಕೀಯ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಕೃಷಿ, ಸಂಪರ್ಕ ಮತ್ತು ಸಂಚಾರ ವ್ಯವಸ್ಥೆ, ಕಲ್ಯಾಣ ಕರ್ನಾಟಕದಲ್ಲಿ ಸ್ವಾತಂತ್ರ್ಯ ಚಳವಳಿ, ವಿಮೋಚನಾ ಚಳವಳಿ, ಬ್ರಿಟಿಷರು ವಿಧಿಸಿದ ಮೂರು ಅವಾಸ್ತವಿಕ ಷರತ್ತುಗಳು, ಪೊಲೀಸ್ ಕಾರ್ಯಾಚರಣೆ, 1948 ರಿಂದ 1956ರವರೆಗಿನ ಸ್ವತಂತ್ರ ಭಾರತದಲ್ಲಿ ಹೈದರಾಬಾದ್ ರಾಜ್ಯದ ಆಡಳಿತ, ಅಖಂಡ ಕರ್ನಾಟಕದಲ್ಲಿ ಏಕೀಕರಣ ಚಳವಳಿ, ಫಜಲ್ ಅಲಿ ವರದಿಯಂತೆ ಅಖಂಡ ಕರ್ನಾಟಕ ನಿರ್ಮಾಣ, ಫಜಲ್ ಅಲಿ ಆಯೋಗದ ವರದಿಯ ಶಿಫಾರಸುಗಳು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಧರ್ಮಸಿಂಗ್ ಸಮಿತಿ ವರದಿಯ ಶಿಫಾರಸುಗಳು, ವಿಶೇಷ ಅಭಿವೃದ್ಧಿ ಮಂಡಳಿ ಸ್ಥಾಪನೆ ಕುರಿತು ಚರ್ಚೆ ಆಗಲಿದೆ ಎಂದು ಹೇಳಿದರು.

ಇತಿಹಾಸ ತಜ್ಞ ಬಿ.ಸಿ. ಮಹಾಬಳೇಶ್ವರಪ್ಪ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಕಾಂತ ಗಂಗಶೆಟ್ಟಿ, ಮಹಮ್ಮದ್ ಮಾಜೀದ್ ಅಲಿ ದಾನಿ, ರಘುಶಂಖ ಭಾತಂಬ್ರಾ, ರಾಮಪ್ಪ ಕೋರವಾರ, ಅಶೋಕ ಪವಾರ್, ಸಂತೋಷ್ ಚಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.