ADVERTISEMENT

‘ಹೋರಾಟಗಾರರ ತ್ಯಾಗ ಶ್ಲಾಘನೀಯ’

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2022, 12:34 IST
Last Updated 17 ಸೆಪ್ಟೆಂಬರ್ 2022, 12:34 IST
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿದರು. ಚಂದ್ರಶೇಖರ ಬಿರಾದಾರ, ಶಶಿಧರ ಕೋಸಂಬೆ ಇದ್ದರು
ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿದರು. ಚಂದ್ರಶೇಖರ ಬಿರಾದಾರ, ಶಶಿಧರ ಕೋಸಂಬೆ ಇದ್ದರು   

ಭಾಲ್ಕಿ: ‘ಕಲ್ಯಾಣ ಕರ್ನಾಟಕ ಭಾಗದ ಜನರು ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ, ನಿಜಾಮರ ವಿರುದ್ಧ ಹೋರಾಟ ನಡೆಸಿದ್ದರು’ ಎಂದು ನಿವೃತ್ತ ಪ್ರಾಧ್ಯಾಪಕ ಚಂದ್ರಶೇಖರ ಬಿರಾದಾರ ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲ ಶಿಕ್ಷಣ ಸಮುಚ್ಛಯದಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕಿಂತ ಮುಂಚೆಯೇ ನಮ್ಮ ಭಾಗದ ಬೀದರ್‌, ಉದಗೀರ್‌ನಲ್ಲಿ ಹೋರಾಟಗಾರರಾದ ಶಿವಲಿಂಗಯ್ಯ ದೇಶಮುಖ, ಲಿಂಗಪ್ಪ ಸೇರಿದಂತೆ ಇತರರು ಹೆಚ್ಚಿನ ಕರ ವಿಧಿಸಿದ್ದರಿಂದ ಹೋರಾಟ ನಡೆಸಿದ್ದರು. ನಮಗೆ ಸ್ವಾತಂತ್ರ್ಯ ಪುಕ್ಕಟೆ ದೊರೆತಿಲ್ಲ. ಅನೇಕ ಭಯಾನಕ ಪರಿಣಾಮಗಳ ಫಲದಿಂದ ದೊರೆತಿದೆ ಎಂದು ತಿಳಿಸಿದರು.

ADVERTISEMENT

ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ,‘ಮಹಾನ್‌ ನಾಯಕರ ತ್ಯಾಗ, ಬಲಿದಾನ ವ್ಯರ್ಥವಾಗದಂತೆ ನೋಡಿಕೊಳ್ಳುವ ಹೊಣೆಗಾರಿಕೆ ಯುವಕರ ಮೇಲಿದೆ’ ಎಂದು ಹೇಳಿದರು.

ಆಡಳಿತಾಧಿಕಾರಿ ಮೋಹನರೆಡ್ಡಿ ಮಾತನಾಡಿದರು.

ಸಂಸ್ಥೆಯ ನಿರ್ದೇಶಕ ಶಶಿಧರ ಕೋಸಂಬೆ, ಪ್ರಾಚಾರ್ಯರಾದ ಬಸವರಾಜ ಮೊಳಕೀರೆ, ಮಹಾದೇವ ಪಟ್ನೆ, ಗಿರೀಶ ಘನವಟಕರ್‌, ರಮೇಶ ಕುಟಮಲಗೆ, ಶೀಲವಂತ, ಸಂಯೋಜಕ ಮಹೇಶ ಮಹಾರಾಜ್‌ ಇದ್ದರು. ಲಕ್ಷ್ಮಣ ಮೇತ್ರೆ ಸ್ವಾಗತಿಸಿದರು. ಬಸವರಾಜ್‌ ಪ್ರಭಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.