ADVERTISEMENT

ಆಟೊ ಚಾಲಕರು ಸಂಚಾರಿ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು: ಶ್ರೀಕಾಂತ ಅಲ್ಲಾಪೂರ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2026, 5:52 IST
Last Updated 26 ಫೆಬ್ರುವರಿ 2026, 5:52 IST
ಕಮಲನಗರ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಸಿಪಿಐ ಶ್ರೀಕಾಂತ ಅಲ್ಲಾಪೂರ ನೇತೃತ್ವದಲ್ಲಿ ಆಟೊ ಚಾಲಕರ ಸಭೆ ನಡೆಯಿತು
ಕಮಲನಗರ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಸಿಪಿಐ ಶ್ರೀಕಾಂತ ಅಲ್ಲಾಪೂರ ನೇತೃತ್ವದಲ್ಲಿ ಆಟೊ ಚಾಲಕರ ಸಭೆ ನಡೆಯಿತು   

ಕಮಲನಗರ: ‘ಆಟೊ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು’ ಎಂದು ಸಿಪಿಐ ಶ್ರೀಕಾಂತ ಅಲ್ಲಾಪೂರ ಎಚ್ಚರಿಸಿದರು.

ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಟೊ ಚಾಲಕರ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರತಿಯೊಬ್ಬ ಚಾಲಕರು ಕಡ್ಡಾಯವಾಗಿ ಸಮವಸ್ತ್ರ ಧರಿಸತಕ್ಕದು. ವಾಹನ ಚಾಲನಾ ಪರವಾನಗಿ, ಮಾಲಿನ್ಯ ತಪಾಸಣಾ ಪ್ರಮಾಣ ಪತ್ರ ಒಳಗೊಂಡಂತೆ ಎಲ್ಲಾ ದಾಖಲೆಗಳನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು. ನಿಗದಿತ ಅವಧಿಯೊಳಗೆ ಅದನ್ನು ನವೀಕರಿಸಿಕೊಳ್ಳಬೇಕು’ ಎಂದರು.

ADVERTISEMENT

ಪಿಎಸ್‍ಐ ಆಶಾ ರಾಠೋಡ ಮಾತನಾಡಿ, ‘ಆಟೊ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಬಾಡಿಗೆ ವಸೂಲಾತಿ ಮಾಡುವುದು, ಸಮವಸ್ತ್ರ ಧರಿಸದೆ ಕಾನೂನು ಉಲ್ಲಂಘನೆ ಮಾಡಿದ್ದಲ್ಲಿ ದಂಡ ವಿಧಿಸಲಾಗುವುದು’ ಎಂದು ತಿಳಿಸಿದರು.

‌ಆಟೊ ಚಾಲಕರಾದ ಜ್ಞಾನೋಬಾ ಕಾಂಬಳೆ, ಹಣಮಂತ, ಅಮಜದ್, ಫರದೀನ್, ನಾಗನಾಥ, ಇಮ್ರಾನ್, ಮಹೇಶ, ರಾಮ, ಸುರಜ, ಪ್ರದೀಪ, ಫೀರೋಜ್, ಪ್ರಶಾಂತ, ಗೋವಿಂದ, ಸಾಗರ, ಸಂದೀಪ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.