ADVERTISEMENT

ಬೀದರ್ | ಹೋಳಿ, ರಂಜಾನ ಹಬ್ಬದ ನಿಮಿತ್ತ ರೌಡಿಶೀಟರ್‌ಗಳ ಪರೇಡ್

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2025, 13:34 IST
Last Updated 13 ಮಾರ್ಚ್ 2025, 13:34 IST
ಕಮಲನಗರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಹೋಳಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ರೌಡಿಶೀಟರ್‌ಗಳ ಪರೇಡ್‌ ನಡೆಯಿತು
ಕಮಲನಗರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಹೋಳಿ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ರೌಡಿಶೀಟರ್‌ಗಳ ಪರೇಡ್‌ ನಡೆಯಿತು   

ಕಮಲನಗರ: ‘ಹೋಳಿ ಮತ್ತು ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಶೀಟರ್‌ಗಳ ಪರೇಡ್ ನಡೆಸಲಾಯಿತು. ಸಾರ್ವಜನಿಕರ ಹಿತಾಸಕ್ತಿಗೆ ತೊಂದರೆಯಾಗದಂತೆ ವರ್ತನೆ ರೂಢಿಸಿಕೊಳ್ಳಿ’ ಎಂದು ತಿಳಿಹೇಳಲಾಗಿದೆ ಎಂದು ಸಿಪಿಐ ಅಮರಪ್ಪ ಶಿವಬಲ್ ಹೇಳಿದರು.

ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಹೋಳಿ ಹುಣ್ಣಿಮೆ ಹಾಗೂ ರಂಜಾನ್ ಹಬ್ಬದ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ನಡೆದ ರೌಡಿಶೀಟರ್‌ಗಳ ಪರೇಡ್‌ನಲ್ಲಿ ಅವರು ಮಾತನಾಡಿದರು.

ಪಿಎಸ್‍ಐ ಚಂಧ್ರಶೇಖರ ನಿರ್ಣೆ ಮಾತನಾಡಿ, ‘ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರ ನಿರ್ದೇಶನಗಳನ್ನು ಪಾಲಿಸಬೇಕು. ಕಾನೂನಿನ ಚೌಕಟ್ಟಿನಲ್ಲಿ ಇರಬೇಕು. ಹಬ್ಬದ ವಾತಾವರಣದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಕಾರಣವಾಗದಂತೆ ಇರಬೇಕು. ಇಲ್ಲದಿದ್ದರೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ADVERTISEMENT

ಅಪರಾಧ ವಿಭಾಗ ಪಿಎಸ್‍ಐ ಬಾಲಾಜಿ ಬಳಕಟ್ಟೆ, ಎಆರ್‌ಎಸ್‍ಐ ವಸಂತ ಮೇತ್ರೆ, ಪೊಲೀಸ್ ಸಿಬ್ಬಂದಿ ಲೋಕೇಶ ತೇಲಂಗ, ನವನಾಥ ಮೇತ್ರೆ, ಶಿವಾನಂದ ಫುಲಾರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.