ಬೀದರ್: ಬೆಂಗಳೂರಿನ ಕನಕ ಆಫೀಸರ್ಸ್ ಅಕಾಡೆಮಿ ವತಿಯಿಂದ ಕೊಡಲಾಗುವ ‘ಕನಕ ಚೇತನ’ ಪ್ರಶಸ್ತಿಗೆ ಜಿಲ್ಲೆಯ ಹಿರಿಯ ಪತ್ರಕರ್ತ ಮಲ್ಲಿಕಾರ್ಜುನ ಬಿರಾದಾರ (ಪರಿಹಾರ) ಅವರನ್ನು ಆಯ್ಕೆ ಮಾಡಲಾಗಿದೆ.
ಪತ್ರಿಕಾ ರಂಗಕ್ಕೆ ನೀಡಿದ ಕೊಡುಗೆಗಾಗಿ ಅವರಿಗೆ ಪ್ರಶಸ್ತಿ ಒಲಿದು ಬಂದಿದೆ.
ಬೆಂಗಳೂರಿನ ಚಂದ್ರಾ ಲೇಔಟ್‌ನ ಕನಕ ಭವನದಲ್ಲಿ ಜೂನ್ 3 ರಂದು ನಡೆಯಲಿರುವ ಸಮಾರಂಭದಲ್ಲಿ ಅಕಾಡೆಮಿ ಪ್ರಶಸ್ತಿ ಪ್ರದಾನ ಮಾಡಲಿದೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಗೊಂಡ(ಕುರುಬ) ಸಮಾಜದ ಗಣ್ಯರಿಗೆ ಪ್ರಶಸ್ತಿ ಪ್ರದಾನ ಹಾಗೂ ಯುಪಿಎಸ್‌ಸಿ ಸಾಧಕರಿಗೆ ಸತ್ಕಾರ ಜರುಗಲಿದೆ. ಮುಖ್ಯಮಂತ್ರಿ, ಸಚಿವರು, ಮಠಾಧೀಶರು ಹಾಗೂ ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಾಲ್ಕು ದಶಕಗಳಿಂದ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿರುವ ಮಲ್ಲಿಕಾರ್ಜುನ ಬಿರಾದಾರ ಅವರಿಗೆ ಕರ್ನಾಟಕ ರಾಜ್ಯೋತ್ಸವ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ, ಸನ್ಮಾನಗಳು ಸಂದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.