
ಮರಕಲ್(ಜನವಾಡ): ‘ಗಡಿಗ್ರಾಮಗಳಲ್ಲಿ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಜಾಗೃತಿ ಕಾರ್ಯಕ್ರಮಗಳು ಹೆಚ್ಚು ನಡೆಯಬೇಕು’ ಎಂದು ಪ್ರಾಚಾರ್ಯ ಸುನೀಲಕುಮಾರ ಸಿಂಗಾರೆ ಹೇಳಿದರು.
ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ರಂಗ ತರಂಗ ಸಾಮಾಜಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ‘ವಿದ್ಯಾರ್ಥಿಗಳಲ್ಲಿ ಶಾಲಾ ಹಂತದಿಂದಲೇ ಕನ್ನಡ ಭಾಷೆ ಹಾಗೂ ಸಂಸ್ಕೃತಿ ಉಳಿಸಿ ಬೆಳೆಸುವ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.
ಟ್ರಸ್ಟ್ ಅಧ್ಯಕ್ಷ ಎಂ.ಪಿ. ಮುದಾಳೆ ಅಧ್ಯಕ್ಷತೆ ವಹಿಸಿದ್ದರು. ಚಿಂತಕ ಕುಪೇಂದ್ರ ಎಸ್.ಹೊಮನಿ, ಶಿಕ್ಷಕರಾದ ಪ್ರಕಾಶ ಎಸ್., ಮಹಾವೀರ ಹೋಳೋಳೆ, ಪದ್ಮಾವತಿ, ಸೈಯದ್ ಶಾಬಾದ್ ಅಲಿ, ರೇಣುಕಾ, ರವಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.