
ಕಮಲನಗರ: ಬೀದರ್ ನಗರದ ಚನ್ನಬಸವ ಪಟ್ಟದ್ದೇವರ ರಂಗ ಮಂದಿರದಲ್ಲಿ ಕರವೇ ವತಿಯಿಂದ ನ.7ರಂದು ನಡೆಯಲಿರುವ ಕನ್ನಡ ದೀಕ್ಷಾ ಪ್ರತಿಜ್ಞಾ ಸ್ವೀಕಾರ ಸಮಾರಂಭದ ನಿಮಿತ್ತ ಮಂಗಳವಾರ ಕಮಲನಗರ ಪಟ್ಟಣದ ಅಲ್ಲಮಪ್ರಭು ವೃತ್ತದ ಬಳಿ ಆಗಮಿಸಿದ ಕನ್ನಡ ದಿಕ್ಷಾ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮದ ರಥಕ್ಕೆ ಕರವೇ ತಾಲ್ಲೂಕು ಘಟಕದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಕಸಾಪ ತಾಲ್ಲೂಕು ಅಧ್ಯಕ್ಷ ಪ್ರಶಾಂತ ಮಠಪತಿ ಮಾತನಾಡಿ, ‘ಕರವೇ ಸಂಘಟನೆ ಕೈಗೊಂಡ ಕನ್ನಡ ದೀಕ್ಷೆ ಕಾರ್ಯಕ್ರಮದ ಮೂಲಕ ಕನ್ನಡದ ಅಸ್ಮಿತೆ, ಕನ್ನಡಾಭಿಮಾನ, ಕನ್ನಡದ ಇತಿಹಾಸವನ್ನು ಪ್ರತಿಯೊಬ್ಬ ಕನ್ನಡಿಗರು ಅರಿತುಕೊಳ್ಳಬೇಕು ಎಂಬ ಸದುದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಕರವೇ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಖಾನಾಪುರೆ ಮಾತನಾಡಿ, ‘ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಅಧ್ಯಕ್ಷತೆಯಲ್ಲಿ ಬೀದರ್ ನಗರದಲ್ಲಿ ಸಾವಿರಾರು ಕನ್ನಡ ಹೋರಾಟಗಾರರು, ಕರವೇ ಕಾರ್ಯಕರ್ತರು ಒಂದಾಗಿ ಕನ್ನಡ ದೀಕ್ಷೆ ಸ್ವೀಕರಿಸುವ ಐತಿಹಾಸಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಭಾಗವಹಿಸಿ ಯಶಸ್ವಿಗೊಳಿಸಬೇಕು’ ಎಂದು ಮನವಿ ಮಾಡಿದರು.
ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ಮಹೇಶ, ಕರವೇ ಜಿಲ್ಲಾ ಉಪಾಧ್ಯಕ್ಷ ಸುಭಾಷ ಗಾಯಕವಾಡ, ಕರವೇ ತಾಲ್ಲೂಕು ಅಧ್ಯಕ್ಷ ಮಂಜುನಾಥ ಸ್ವಾಮಿ, ಪ್ರಶಾಂತ ಖಾನಾಪುರೆ, ಶಿವಾನಂದ ವಡ್ಡೆ, ಸಂಗಮೇಶ ಬಿರಾದಾರ, ಅಯೂಬ್ ಖುರೇಷಿ, ಸುರೇಶ ಮೇತ್ರೆ, ಆಕಾಶ ಸ್ವಾಮಿ, ಬಸವರಾಜ ಶೆಟಕಾರ, ಬಬನ್ ರಾಠೋಡ ಇನ್ನಿತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.