ADVERTISEMENT

18ರಂದು ಕನ್ನಡ ಮಾಧ್ಯಮ ನೀಟ್ ವಿದ್ಯಾರ್ಥಿಗಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2022, 13:48 IST
Last Updated 15 ಸೆಪ್ಟೆಂಬರ್ 2022, 13:48 IST
ಸುರೇಶ ಚನಶೆಟ್ಟಿ
ಸುರೇಶ ಚನಶೆಟ್ಟಿ   

ಬೀದರ್‌: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಲ್ಯಾಣ ಕರ್ನಾಟಕದ ಕನ್ನಡ ಮಾಧ್ಯಮ ನೀಟ್ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಸೆಪ್ಟೆಂಬರ್ 18ರ ಬೆಳಿಗ್ಗೆ11.30ಕ್ಕೆ ನಗರದ ಡಾ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ನಡೆಯಲಿದೆ.

ನೀಟ್ ಪರಿಕ್ಷೆಯಲ್ಲಿ 720 ಕ್ಕೆ 300ಕ್ಕೂ ಹೆಚ್ಚು ಅಂಕಗಳನ್ನು ಪಡೆದಿರುವ ಕಲ್ಯಾಣ ಕರ್ನಾಟಕ ವಿಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಿಸಲು ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 16ರೊಳಗೆ ಅರ್ಹರು ಹೆಸರನ್ನು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಆಯಾ ಜಿಲ್ಲೆಗಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನು ಸಂಪರ್ಕಿಸಬಹುದು ಎಂದು ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ ತಿಳಿಸಿದ್ದಾರೆ.

ಸುರೇಶ ಚನಶೆಟ್ಟಿ (ಬೀದರ್)–9986792323, ವಿಜಯಕುಮಾರ ಪಾಟೀಲ ತೇಗಲತಿಪ್ಪಿ (ಕಲಬುರಗಿ)– 9880349025, ಸಿದ್ದಪ್ಪ ಹೊಟ್ಟಿ (ಯಾದಗಿರಿ)–9480957169, ನಿಷ್ಟಿ ರುದ್ರಪ್ಪ (ಬಳ್ಳಾರಿ)–9342726398, ಶರಣೆಗೌಡ ಪೊಲೀಸ್‌ಪಾಟೀಲ (ಕೊಪ್ಪಳ)–9741980328, ರಂಗಣ್ಣ ಪಾಟೀಲ (ರಾಯಚೂರು)–8095292269.

ADVERTISEMENT

ಬೇರೆ ಜಿಲ್ಲೆಯಿಂದ ಬರುವ ವಿದ್ಯಾರ್ಥಿಗಳಿಗೆ ವಸತಿ ಮತ್ತು ಪ್ರಯಾಣ ಭತ್ಯೆ ನೀಡಲಾಗುವುದು. ನಗರದ ಐತಿಹಾಸಿಕ ಸ್ಥಳಗಳ ವೀಕ್ಷಣೆಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 9448332012 ಅಥವಾ 9483 978814.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.