ADVERTISEMENT

ಜನಪ್ರತಿನಿಧಿಗಳ ಗೈರು: ಕಸಾಪ ಅಧ್ಯಕ್ಷ ಗರಂ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 16:04 IST
Last Updated 1 ನವೆಂಬರ್ 2019, 16:04 IST

ಔರಾದ್: ತಾಲ್ಲೂಕು ಆಡಳಿತ ಶುಕ್ರವಾರ ಇಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳ ಅನುಪಸ್ಥಿತಿಗೆ ಅಸಮಾಧಾನ ವ್ಯಕ್ತವಾಯಿತು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ಬಹುತೇಕ ಸದಸ್ಯರು ಸಭೆಯಲ್ಲಿ ಪಾಲ್ಗೊಳ್ಳದೆ ಇರುವುದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಜಗನ್ನಾಥ ಮೂಲಗೆ ಅಸಮಾಧಾನಕ್ಕೆ ಕಾರಣವಾಯಿತು.

ಜಯಂತಿಗಳು ಹಾಗೂ ಇತರೆ ಕಾರ್ಯಕ್ರಮಗಳಿಗೆ ಜನಪ್ರತಿನಿಧಿಗಳು ಕಡ್ಡಾಯವಾಗಿ ಪಾಲ್ಗೊಳ್ಳುತ್ತಾರೆ. ದೊಡ್ಡ ದೊಡ್ಡ ಬ್ಯಾನರ್ ಹಾಕಿಕೊಳ್ಳುತ್ತಾರೆ. ಆದರೆ ನಾಡಿನ ಹೆಮ್ಮೆಯ ಪ್ರತೀಕವಾಗಿರುವ ಕನ್ನಡ ರಾಜ್ಯೋತ್ಸವಕ್ಕೆ ಅಸಡ್ಡೆ ತೋರಿಸುವುದು ಸರಿಯಲ್ಲ. ಗಡಿಭಾಗದ ಕನ್ನಡಿಗರು ಈ ವಿಷಯದಲ್ಲಿ ಜಾಗೃತರಾಗಿ ಚುನಾವಣೆ ವೇಳೆ ಅಂತವರಿಗೆ ತಕ್ಕ ಪಾಠ ಕಲಿಸಬೇಕು. ಕನ್ನಡ ನಾಡು ನುಡಿ ಬಗ್ಗೆ ಪ್ರಾಮಾಣಿಕ ಕಾಳಜಿ ಇರುವವರಿಗೆ ಮತ ಹಾಕಬೇಕು’ ಎಂದು ಹೇಳಿದರು.

ADVERTISEMENT

ರಾಜ್ಯೋತ್ಸವ ಮೆರವಣಿಗೆ ಮತ್ತು ಕಾರ್ಯಕ್ರಮದಲ್ಲಿ ಜನರ ಸಂಖ್ಯೆ ತೀರಾ ಕಡಿಮೆಯಾಗಿತ್ತು. ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಅವರ ಬಹತೇಕ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ನಾಯಕರು ಕಾರ್ಯಕ್ರಮದಿಂದ ದೂರು ಉಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.