ADVERTISEMENT

ಬೀದರ್ | ಸಂಭ್ರಮದ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಿದ ಈಶ್ವರ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2025, 4:15 IST
Last Updated 1 ನವೆಂಬರ್ 2025, 4:15 IST
   

ಬೀದರ್: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು.

ಆನಂತರ ಅಲಂಕರಿಸಿದ ತೆರೆದ ವಾಹನದಲ್ಲಿ ತೆರಳಿ ಗೌರವ ವಂದನೆ ಸಲ್ಲಿಸಿದರು. ಬಳಿಕ ವಿವಿಧ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.

ಪೊಲೀಸ್, ಮಹಿಳಾ ಪೊಲೀಸ್ ಪಡೆ, ಸಶಸ್ತ್ರ ಮೀಸಲು ಪಡೆ, ಗೃಹರಕ್ಷಕ ದಳ, ಎನ್.ಸಿ.ಸಿ.ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾ ದಳ, ವಿವಿಧ ಶಾಲಾ ಕಾಲೇಜಿನ ಮಕ್ಕಳು ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಯಿತು. ಶಕ್ತಿ ಯೋಜನೆ, ತೋಟಗಾರಿಕೆ ಬೆಳೆಗಳ ಮಹತ್ವ, ರೇಷ್ಮೆ ಕೃಷಿ, ಕನ್ನಡ ರಥ‌ಗಮನ ಸೆಳೆಯಿತು.

ADVERTISEMENT

ಈ ದಿನ ಸಂಭ್ರಮ, ಅಭಿಮಾನದ ದಿನ. ಬಹಳ ಸಡಗರ, ಸಂಭ್ರಮದಿಂದ ಜಿಲ್ಲಾ ಕೇಂದ್ರದಲ್ಲಿ ಆಚರಿಸಲಾಗುತ್ತಿದೆ ಎಂದು ಸಚಿವ ಈಶ್ವರ ಬಿ‌ ಖಂಡ್ರೆ ಎಂದರು.

ಭಾಷಾವಾರು ಪ್ರಾಂತ್ಯ ವಿಭಜನೆಯ ವೇಳೆ ನವೆಂಬರ್ ೧ರಂದು ಮೊದಲಿಗೆ ಮೈಸೂರು ರಾಜ್ಯವಾಗಿ ನಂತರ ಕರ್ನಾಟಕವಾಗಿ ರೂಪು ತಳೆದದ್ದು ಗೊತ್ತಿದೆ. ಹೀಗಾಗಿಯೇ ನವೆಂಬರ್ ೧ರಂದು ಕನ್ನಡ ರಾಜ್ಯೀತ್ಸವ ಅಥವಾ ಕರ್ನಾಟಕ ರಾಜ್ಯೀತ್ಸವ ಆಚರಿಸಲಾಗುತ್ತದೆ ಎಂದರು.

ಸಂಸದ ಸಾಗರ್ ಖಂಡ್ರೆ, ಶಾಸಕರಾದ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಭೀಮರಾವ್ ಪಾಟೀಲ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಪಂ ಸಿಇಒ ಡಾ. ಗಿರೀಶ ಬದೋಲೆ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಪಾಲಿಕೆ ಕಮಿಷನರ್ ರಮ್ಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ, ಎಸ್ಪಿ ಪ್ರದೀಪ್ ಗುಂಟಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.