ಸಾವು
ಪ್ರಾತಿನಿಧಿಕ ಚಿತ್ರ
ಬೀದರ್: ಭಾಲ್ಕಿ ತಾಲ್ಲೂಕಿನ ಹುಣಜಿ (ಕೆ) ಹತ್ತಿರ ತುಂಬಿ ಹರಿಯುತ್ತಿರುವ ಕಾರಂಜಾ ಜಲಾಶಯದ ಕಾಲುವೆ ಪ್ರವಾಹಕ್ಕೆ ಸಿಲುಕಿ ಬಾಲಕನೊಬ್ಬ ಕೊಚ್ಚಿಹೋಗಿ ಪ್ರಾಣ ಕಳೆದುಕೊಂಡಿದ್ದಾನೆ.
ಹುಣಜಿ(ಕೆ) ಗ್ರಾಮದ ಹರೀಶ ರಾಜಕುಮಾರ ಮಾನಕರ್ (16) ಮೃತ ಬಾಲಕ. ಬೆಳಿಗ್ಗೆ ಹರೀಶ
ಮನೆಯಿಂದ ಹೊಲಕ್ಕೆ ಹೋಗಿದ್ದ. ರಾತ್ರಿಯಾದರೂ ಮನೆಗೆ ಬರಲಿಲ್ಲ. ಎಲ್ಲೆಡೆ ಹುಡುಕಾಡಿದರೂ ಮಾಹಿತಿ ಸಿಗಲಿಲ್ಲ. ಆತಂಕಗೊಂಡ ಪಾಲಕರು ಧನ್ನೂರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಮಧ್ಯೆ ಹರೀಶ ಶವ ಕಾಲುವೆಯಲ್ಲಿ ಪತ್ತೆಯಾಗಿದೆ. ಹೊಲದ ಹತ್ತಿರ ಕಾಲುವೆಯಿದೆ. ಕೈಕಾಲು ತೊಳೆದುಕೊಳ್ಳುವುದಕ್ಕಾಗಿ ಕಾಲುವೆ ಬಳಿ ಹೋದಾಗ ಆಯತಪ್ಪಿ ಒಳಗೆ ಬಿದ್ದು ನೀರಿನ ರಭಸದಲ್ಲಿ ಕೊಚ್ಚಿಕೊಂಡು ಹೋಗಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಧನ್ನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.