ADVERTISEMENT

ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಕರಾಟೆ ತರಬೇತಿ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 15:04 IST
Last Updated 5 ಡಿಸೆಂಬರ್ 2020, 15:04 IST
ಬೀದರ್‌ನ ಪೊಲೀಸ್ ಕವಾಯತು ಮೈದಾನದಲ್ಲಿ ಕರಾಟೆ ತರಬೇತುದಾರ ಶಿವರಾಮ ರಾಠೋಡ್ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಕರಾಟೆ ತರಬೇತಿ ನೀಡಿದರು
ಬೀದರ್‌ನ ಪೊಲೀಸ್ ಕವಾಯತು ಮೈದಾನದಲ್ಲಿ ಕರಾಟೆ ತರಬೇತುದಾರ ಶಿವರಾಮ ರಾಠೋಡ್ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಕರಾಟೆ ತರಬೇತಿ ನೀಡಿದರು   

ಬೀದರ್: ಬ್ರೂಸ್ ಲೀ ಬುಡೋಕನ್ ಯೋಗ ಕರಾಟೆ ತರಬೇತಿ ಸಂಸ್ಥೆ ವತಿಯಿಂದ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ತಾತ್ಕಾಲಿಕ ಪೊಲೀಸ್ ತರಬೇತಿ ಶಾಲೆಯ 11ನೇ ತಂಡದ ಪೊಲೀಸ್ ಪ್ರಶಿಕ್ಷಣಾರ್ಥಿಗಳಿಗೆ ಕರಾಟೆ ತರಬೇತಿ ಶಿಬಿರ ನಡೆಯಿತು.

31 ಜನ ಪೊಲೀಸ್ ಪ್ರಶಿಕ್ಷಣಾರ್ಥಿಗಳು ಶಿಬಿರದಲ್ಲಿ ಕರಾಟೆಯ ಕಟಾ, ಮೂಮೆಂಟ್ ಕಲೆಗಳನ್ನು ಕರಗತ ಮಾಡಿಕೊಂಡಿದ್ದಾರೆ ಎಂದು ಬ್ರೂಸ್ ಲೀ ಬುಡೋಕನ್ ಯೋಗ ಕರಾಟೆ ತರಬೇತಿ ಸಂಸ್ಥೆಯ ಅಧ್ಯಕ್ಷರೂ ಆದ ಕರಾಟೆ ತರಬೇತುದಾರ ಶಿವರಾಮ ರಾಠೋಡ್ ಮುಕ್ತಾಯ ಕಾರ್ಯಕ್ರಮದಲ್ಲಿ ತಿಳಿಸಿದರು.

ಕರಾಟೆ ಸಹ ತರಬೇತುದಾರರಾದ ದೀಪಕ್ ರಾಠೋಡ್, ಸುನೀಲ್ ಭಾವಿಕಟ್ಟಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.