ಔರಾದ್: ತಾಲ್ಲೂಕಿನ ಸಂತಪುರ ಸಿದ್ದರಾಮೇಶ್ವರ ಕಾಲೇಜಿನಲ್ಲಿ ಶುಕ್ರವಾರ ಕಾರ್ಗಿಲ್ ವಿಜಯ ದಿವಸ್ ಆಚರಿಸಲಾಯಿತು. ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರ ತ್ಯಾಗ ಸ್ಮರಿಸಿ ಗೌರವಿಸಲಾಯಿತು.
ಪ್ರಾಂಶುಪಾಲ ನವೀಲಕುಮಾರ ಉತ್ಕಾರ ಮಾತನಾಡಿ, ‘ಎರಡು ತಿಂಗಳ ಕಾಲ ನಡೆದ ಕಾರ್ಗಿಲ್ ಯುದ್ಧದಲ್ಲಿ ನಮ್ಮ ಅನೇಕ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅವರಲ್ಲಿನ ದೇಶ ಪ್ರೇಮ ಇಂದಿನ ಯುವ ಪೀಳಿಗೆ ತಿಳಿದುಕೊಳ್ಳಬೇಕು’ ಎಂದು ಹೇಳಿದರು.
‘ಅನೇಕರ ತ್ಯಾಗ, ಶ್ರಮದಿಂದ ಈ ದೇಶ ಕಟ್ಟಲಾಗಿದೆ. ಇದನ್ನು ಉಳಿಸಿಕೊಂಡು ಹೋಗುವುದು ಈ ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ’ ಎಂದು ಹೇಳಿದರು.
ಉಪನ್ಯಾಸಕಿ ಪ್ರಿಯಾಂಕಾ ಗೊನ್ನಳಿಕರ್ ಮಾತನಾಡಿ, ‘ವಿಜಯ ದಿವಸವನ್ನು ಎಲ್ಲರೂ ಸಂಭ್ರಮದಿಂದ ಆಚರಿಸಿ ಭಾರತೀಯ ಸೈನ್ಯಕ್ಕೆ ಗೌರವಿಸಬೇಕು’ ಎಂದು ಹೇಳಿದರು.
ಉಪನ್ಯಾಸಕ ಶಿವಪುತ್ರ ಧರಣಿ, ರಾಜಕುಮಾರ ಹಳ್ಳಿಕರ, ಸುಧಾ ಕೌಟಿಗೆ, ವನದೇವಿ ಎಕ್ಕಳೆ, ಅಶ್ವಿನಿ ಹಿಂದೊಡ್ಡಿ, ಸಂತೋಷ ಧೊಳಗಂಡೆ, ಸುಧೀರ ಆಲೂರೆ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.