ADVERTISEMENT

ಬೀದರ್ | ಪೊಲೀಸ್‌ ಬಂದೋಬಸ್ತ್‌ನಲ್ಲಿ ಮಹಾರಾಷ್ಟ್ರ ಬಸ್ ಸಂಚಾರ

ಕರ್ನಾಟಕ ಬಂದ್‌ಗೆ ಜಿಲ್ಲೆಯಲ್ಲಿ ಸಿಗದ ಬೆಂಬಲ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2025, 6:21 IST
Last Updated 22 ಮಾರ್ಚ್ 2025, 6:21 IST
   

ಬೀದರ್: ವಿವಿಧ ಕನ್ನಡಪರ‌ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ ಜಿಲ್ಲೆಯಲ್ಲಿ ಬೆಂಬಲ ದೊರೆತಿಲ್ಲ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ತೆಲಂಗಾಣ, ಮಹಾರಾಷ್ಟ್ರದ ಸಾರಿಗೆ ಸಂಸ್ಥೆ ಬಸ್‌ಗಳು, ಆಟೋ,‌ ಟಂಟಂ ಸೇರಿದಂತೆ ಎಲ್ಲ ರೀತಿಯ‌ ವಾಹನಗಳು ಎಂದಿನಂತೆ ಸಂಚರಿಸುತ್ತಿವೆ.

ಆಸ್ಪತ್ರೆ,‌ ಶಾಲಾ, ಕಾಲೇಜು, ಎಪಿಎಂಸಿ ಮಾರುಕಟ್ಟೆ, ಮೆಡಿಕಲ್‌ಗಳು ತೆರೆದಿವೆ. ಜನಜೀವನ ಸಹಜವಾಗಿದೆ. ಮಧ್ಯಾಹ್ನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಲಿದ್ದು, ಅಷ್ಟಕ್ಕೆ ಸೀಮಿತವಾಗಿದೆ. ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ನಡೆಸಿದ ಹಲ್ಲೆ ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ.

ADVERTISEMENT

ಬಂದೋಬಸ್ತ್‌ನಲ್ಲಿ ಮಹಾರಾಷ್ಟ್ರ ಬಸ್ ಸಂಚಾರ:

ಮಹಾರಾಷ್ಟ್ರದ ಬಸ್‌ಗಳಿಗೆ ಜಿಲ್ಲಾ ಪೊಲೀಸರು ವಿಶೇಷ ಬಂದೋಬಸ್ತ್ ಮಾಡಿದ್ದಾರೆ. ಗಡಿ ದಾಟುವ ತನಕ ಮಹಾರಾಷ್ಟ್ರದ ಬಸ್‌ಗಳಲ್ಲಿ ಪೊಲೀಸರು ಸಂಚರಿಸುತ್ತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಲಾಗಿದೆ.

ನಗರದ ಪ್ರಮುಖ ವೃತ್ತಗಳು, ಆಯಕಟ್ಟಿನ ಜಾಗಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.