ಹುಲಸೂರ: ಮುಂಬರುವ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ ತಯಾರಿ ನಡೆಸಿದ್ದು, ತುಕಾರಾಮ ಹಜಾರೆ ಅವ ರನ್ನು ಭಾಲ್ಕಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
‘ಪಕ್ಷ ಚುನಾವಣೆ ತಯಾರಿ ನಡೆಸಿದೆ. ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ನನಗೆ ಟಿಕೆಟ್ ಸಿಕ್ಕಿರುವುದು ಖುಷಿ ತಂದಿದೆ’ ಎಂದು ತುಕಾರಾಮ ಹಜಾರೆ ತಿಳಿಸಿದರು.
‘ಭಾಲ್ಕಿ ಕ್ಷೇತ್ರದ ಜನರ ಸೇವೆ ಮಾಡಲು ತಯಾರಿದ್ದೇನೆ. ಗೆಲ್ಲಿಸಿದರೆ ಕ್ಷೇತ್ರವನ್ನು ಎಲ್ಲ ರೀತಿಯಿಂದಲೂ ಅಭಿವೃದ್ಧಿಪಡಿಸು ತ್ತೇನೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.