ಬೀದರ್: ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎಸ್. ಬಲಬೀರಸಿಂಗ್ ಅವರಿಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದರು.
ಸಾಮಾಜಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಬಲಬೀರಸಿಂಗ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ.
ಬಲಬೀರಸಿಂಗ್ ಅವರು ಕಲ್ಯಾಣ ಕರ್ನಾಟಕ ಭಾಗದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತ ಬಂದಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ಸುನೀಲಕುಮಾರ, ಕಂದಾಯ ಸಚಿವ ಆರ್. ಅಶೋಕ, ಅಧಿಕಾರಿಗಳು, ಗಣ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.