ADVERTISEMENT

ಕಾರ್ತಿಕ ಮಾಸ: ವಿಶೇಷ ಪೂಜೆ, ದೀಪೋತ್ಸವ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2022, 12:21 IST
Last Updated 26 ನವೆಂಬರ್ 2022, 12:21 IST
ಖಟಕಚಿಂಚೋಳಿ ಸಮೀಪದ ಚಳಕಾಪುರ ಗ್ರಾಮದ ಸಿದ್ಧಾರೂಢ ಮಠದಲ್ಲಿ ಕಾರ್ತಿಕ ದೀಪೋತ್ಸವ ನಡೆಯಿತು
ಖಟಕಚಿಂಚೋಳಿ ಸಮೀಪದ ಚಳಕಾಪುರ ಗ್ರಾಮದ ಸಿದ್ಧಾರೂಢ ಮಠದಲ್ಲಿ ಕಾರ್ತಿಕ ದೀಪೋತ್ಸವ ನಡೆಯಿತು   

ಖಟಕಚಿಂಚೋಳಿ: ಸಮೀಪದ ಚಳಕಾಪುರ ಗ್ರಾಮದ ಸಿದ್ಧಾರೂಢ ಮಠದಲ್ಲಿ ಬುಧವಾರ ಕಾರ್ತಿಕ ಮಾಸದ ಪ್ರಯುಕ್ತ ಕಾರ್ತಿಕ ದೀಪೋತ್ಸವ ನಡೆಯಿತು.

ಬೀದರ್‌ನ ಚಿದಂಬರಾಶ್ರಮದ ಶಿವಕುಮಾರ ಸ್ವಾಮೀಜಿ ಸಿದ್ಧಾರೂಢರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ದೀಪೋತ್ಸವಕ್ಕೆ ಚಾಲನೆ ನೀಡಿದರು. ಗ್ರಾಮದ ಮಹಿಳೆಯರು ಹಾಗೂ ಪುರುಷರು ಸೇರಿ ದೀಪ ಬೆಳಗಿಸಿ ಸಂಭ್ರಮಿಸಿದರು.

ದೇವಸ್ಥಾನದ ಮುಂಭಾಗದಲ್ಲಿ ಸಾವಿರಾರು ದೀಪಗಳನ್ನು ಹಚ್ಚಿದರು. ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

ADVERTISEMENT

ಮಠದ ಶಂಕರಾನಂದ ಸ್ವಾಮೀಜಿ ಹಾಗೂ ವ್ಯವಸ್ಥಾಪಕ ಶರಣಯ್ಯ ಮಠಪತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.