ADVERTISEMENT

ಆಸ್ತಿ ತೆರಿಗೆ ಯಥಾವತ್ ಮುಂದುವರಿಸಿ

​ಪ್ರಜಾವಾಣಿ ವಾರ್ತೆ
Published 25 ಮೇ 2020, 14:52 IST
Last Updated 25 ಮೇ 2020, 14:52 IST
   

ಬೀದರ್: 2020-21ನೇ ಸಾಲಿಗೆ ನಗರಸಭೆ ಆಸ್ತಿ ತೆರಿಗೆ ಹೆಚ್ಚಿಸಿರುವುದನ್ನು ಹಿಂಪಡೆಯಬೇಕು ಎಂದು ಬೀದರ್ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಬಿ.ಜಿ. ಶೆಟಕಾರ ಹಾಗೂ ಕಾರ್ಯದರ್ಶಿ ವೀರೇಂದ್ರ ಶಾಸ್ತ್ರಿ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಆಸ್ತಿ, ಸ್ವಂತ ವಸತಿ, ನಿವೇಶನ ಹಾಗೂ ಸ್ವಂತ ಕಟ್ಟಡಗಳಿಗೆ ಸಂಬಂಧಿಸಿದಂತೆ 2019-20ನೇ ಸಾಲಿನ ತೆರಿಗೆಯನ್ನೇ ಮುಂದುವರಿಸಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.

ತೆರಿಗೆ ಪಾವತಿಸಲು ಆರು ತಿಂಗಳ ಬಡ್ಡಿ ರಹಿತ ಕಾಲಾವಕಾಶ ನೀಡಬೇಕು. ನಗರಸಭೆಯಿಂದ ನೀಡುವ ಹೊಸ ಅನುಮತಿ ಹಾಗೂ ನವೀಕರಣ ಶುಲ್ಕದಲ್ಲಿ ಶೇ 50 ರಷ್ಟು ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.