ADVERTISEMENT

ಸಾಮೂಹಿಕವಾಗಿ ಹನುಮಾನ್‌ ಚಾಲೀಸಾ ಪಠಣ

ಬಜರಂಗ ದಳದ ತಾಲ್ಲೂಕು ಘಟಕದಿಂದ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 4:30 IST
Last Updated 5 ಡಿಸೆಂಬರ್ 2022, 4:30 IST
ಬಸವಕಲ್ಯಾಣದಲ್ಲಿ ನಡೆದ ಹನುಮಾನ್ ಚಾಲೀಸಾ ಪಠಣ ಹಾಗೂ ಸಂಕೀರ್ತನೆ ಕಾರ್ಯಕ್ರಮದಲ್ಲಿ ಹನುಮ ಮಾಲಾಧಾರಿಗಳು ಪಾಲ್ಗೊಂಡಿದ್ದರು
ಬಸವಕಲ್ಯಾಣದಲ್ಲಿ ನಡೆದ ಹನುಮಾನ್ ಚಾಲೀಸಾ ಪಠಣ ಹಾಗೂ ಸಂಕೀರ್ತನೆ ಕಾರ್ಯಕ್ರಮದಲ್ಲಿ ಹನುಮ ಮಾಲಾಧಾರಿಗಳು ಪಾಲ್ಗೊಂಡಿದ್ದರು   

ಬಸವಕಲ್ಯಾಣ: ನಗರದ ಮುಂಡ್ಯಾಪಾಳಿ ಹನುಮಾನ ದೇವರಗುಡ್ಡದ ದೇವಸ್ಥಾನದಲ್ಲಿ ಶನಿವಾರ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ವತಿಯಿಂದ ಸಾಮೂಹಿಕ ಹನುಮಾನ್‌ ಚಾಲೀಸಾ ಪಠಣ ಮತ್ತು ಸಂಕೀರ್ತನೆ ನಡೆಯಿತು.

ಬಜರಂಗ ದಳದ ತಾಲ್ಲೂಕು ಸಂಯೋಜಕ ರವಿ ನಾವದ್ಗೇಕರ್ ನೇತೃತ್ವದಲ್ಲಿ ಹನುಮ ಮಾಲಾಧಾರಣೆ ಕಾರ್ಯಕ್ರಮ ನಡೆಯಿತು.

ವಿಶ್ವ ಹಿಂದೂ ಪರಿಷತ್ತಿನ ಕಲಬುರಗಿ ವಿಭಾಗೀಯ ಕಾರ್ಯದರ್ಶಿ ಅಂಬರೀಶ ಸೂಲೆಗಾವೆ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ನೌಬಾದೆ, ತಾಲ್ಲೂಕು ಘಟಕದ ಅಧ್ಯಕ್ಷ ಶ್ರೀಶೈಲ್ ವಾತಡೆ, ಪ್ರಮುಖರಾದ ರವಿ ಸಕಟ, ಕಮಲಜೀತ್ ಹಾಗೂ ರಮೇಶ ಹಿರೇಮಠ ಪಾಲ್ಗೊಂಡಿದ್ದರು.

ADVERTISEMENT

ರಾತ್ರಿ ದೀಪೋತ್ಸವ ಆಯೋಜಿಸಲಾಗಿತ್ತು. ಪ್ರಸಾದ ವಿತರಿಸಲಾಯಿತು. ಮಹಿಳೆಯರು ಮಕ್ಕಳಾದಿಯಾಗಿ 300 ಕ್ಕೂ ಅಧಿಕ ಭಕ್ತರು ಪಾಲ್ಗೊಂಡಿದ್ದರು. ವಿವಿಧ ಪಕ್ಷಗಳ ಮುಖಂಡರು, ಗಣ್ಯರು ಸಹ ಭೇಟಿ ನೀಡಿ ದರ್ಶನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.