ADVERTISEMENT

ಔರಾದ್: ಪೌರಕಾರ್ಮಿಕರಿಗೆ ಕಿಟ್ ವಿತರಣೆ

​ಪ್ರಜಾವಾಣಿ ವಾರ್ತೆ
Published 7 ಮೇ 2021, 5:18 IST
Last Updated 7 ಮೇ 2021, 5:18 IST
ಔರಾದ್ ಪಟ್ಟಣದಲ್ಲಿ ಬುಧವಾರ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಗೆ ಅಧ್ಯಕ್ಷೆ ಅಂಬಿಕಾ ಪವಾರ್ ಕೋವಿಡ್ ಕಿಟ್ ವಿತರಿಸಿದರು
ಔರಾದ್ ಪಟ್ಟಣದಲ್ಲಿ ಬುಧವಾರ ಪಟ್ಟಣ ಪಂಚಾಯಿತಿ ಪೌರ ಕಾರ್ಮಿಕರಿಗೆ ಅಧ್ಯಕ್ಷೆ ಅಂಬಿಕಾ ಪವಾರ್ ಕೋವಿಡ್ ಕಿಟ್ ವಿತರಿಸಿದರು   

ಔರಾದ್: ‘ಮಳೆ, ಚಳಿ, ಬಿಸಿಲು ಲೆಕ್ಕಿಸದೆ ಪೌರ ಕಾರ್ಮಿಕರು ಸಮಾಜದ ಸ್ವಾಸ್ಥ್ಯಕ್ಕಾಗಿ ದುಡಿಯುತ್ತಾರೆ’ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ಪವಾರ್ ಹೇಳಿದರು.

ಪಟ್ಟಣದಲ್ಲಿ ಬುಧವಾರ ಪೌರ ಕಾರ್ಮಿಕರಿಗೆ ಕೋವಿಡ್ ಕಿಟ್ ವಿತರಿಸಿ ಅವರು ಮಾತನಾಡಿದರು.

‘ಸದ್ಯ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇದನ್ನು ನಿಯಂತ್ರಿಸಲು ಸ್ವಚ್ಛ ಪರಿಸರವೂ ಅಷ್ಟೇ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಪಟ್ಟಣದ ಎಲ್ಲೆಡೆ ಸ್ವಚ್ಛತೆ ಕಾಪಾಡಬೇಕಿದೆ. ಇದಕ್ಕಾಗಿ ಜನರ ಸಹಕಾರವೂ ಬೇಕು’ ಎಂದು ಕೋರಿದರು.

ADVERTISEMENT

ಪಟ್ಟಣ ಪಂಚಾಯಿತಿ ಮುಖ್ಯಾಧಿ ಕಾರಿ ರವಿ ಸುಕುಮಾರ ಮಾತನಾಡಿ, ‘ಪಟ್ಟಣದ ಎಲ್ಲ 21 ಪೌರ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಅಗತ್ಯ ರಕ್ಷಾ ಕವಚ ಕೊಡಲಾಗಿದೆ. ಅವರು ತಮ್ಮ ಆರೋಗ್ಯ ಸುರಕ್ಷಿತವಾಗಿಟ್ಟುಕೊಂಡು ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

‘ಪಟ್ಟಣದಲ್ಲಿ ಅಗತ್ಯವಿರುವ ಪೌರ ಕಾರ್ಮಿಕರ ನೇಮಕ ಮಾಡಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಪ್ರಮುಖ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಮಂಜೂರಾತಿ ಸಿಕ್ಕಿದೆ’ ಎಂದು ಅವರು ತಿಳಿಸಿದರು.

ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಸಂತೋಷ ಪೋಕಲವಾರ, ಕೇರಬಾ ಪವಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.