ADVERTISEMENT

ಬೀದರ್: ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಮೇಳ ನ. 26ಕ್ಕೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2021, 14:33 IST
Last Updated 25 ನವೆಂಬರ್ 2021, 14:33 IST
ಜಿಲ್ಲಾಧಿಕಾರಿ ರಾಮಚಂದ್ರನ್ ಆರ್
ಜಿಲ್ಲಾಧಿಕಾರಿ ರಾಮಚಂದ್ರನ್ ಆರ್   

ಬೀದರ್: ಕೋವಿಡ್ ಮೂರನೇ ಅಲೆ ಸಾಧ್ಯತೆ ಕಾರಣ ಮುಂಜಾಗ್ರತೆ ವಹಿಸುತ್ತಿರುವ ಜಿಲ್ಲಾ ಆಡಳಿತವು ನ. 26 ರಂದು ಜಿಲ್ಲೆಯಾದ್ಯಂತ ವಿಶೇಷ ಕೋವಿಡ್ ಲಸಿಕೆ ಮೇಳ ಹಮ್ಮಿಕೊಂಡಿದೆ.

ಈವರೆಗೆ ಕೋವಿಡ್ ಲಸಿಕೆ ಪಡೆಯದೇ ಇರುವವರು ಹಾಗೂ ಎರಡನೇ ಡೋಸ್ ಬಾಕಿ ಉಳಿಸಿಕೊಂಡವರು ತಪ್ಪದೇ ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮನವಿ ಮಾಡಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಲಸಿಕೆ ಮೇಳ ಯಶಸ್ವಿಗೆ ಶ್ರಮಿಸಬೇಕು ಎಂದು ಸೂಚಿಸಿದ್ದಾರೆ.

ADVERTISEMENT

ಅರ್ಹ ಪ್ರತಿಯೊಬ್ಬರಿಗೂ ಕೋವಿಡ್ ಸೋಂಕು ಪ್ರತಿಬಂಧಕ ಲಸಿಕೆ ಕೊಡುವುದು ಜಿಲ್ಲಾ ಆಡಳಿತದ ಉದ್ದೇಶವಾಗಿದೆ. ಹೊಟೇಲ್, ಅಂಗಡಿ ಸೇರಿದಂತೆ ಪ್ರತಿ ನಿತ್ಯ ಜನಸಂದಣಿ ಮಧ್ಯೆ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಪರಿಶೀಲನೆ ವೇಳೆ ಯಾರಾದರೂ ಲಸಿಕೆ ಪಡೆಯದೇ ಇರುವುದು ಕಂಡು ಬಂದರೆ ಅಂಗಡಿಗಳ ಮಾಲೀಕರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.