ಬೀದರ್: ಕರ್ನಾಟಕ ಲೋಕಸೇವಾ ಆಯೋಗದ ಗೆಜೆಟೆಡ್ ಪ್ರೊಬೇಷನರಿ ಗ್ರುಪ್ ‘ಎ’ ಮತ್ತು ‘ಬಿ’ ವೃಂದದ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಜಿಲ್ಲೆಯ ಒಟ್ಟು 28 ಕೇಂದ್ರಗಳಲ್ಲಿ ಮಂಗಳವಾರ ನಡೆಯಿತು.
ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ಬಂದು ಪರೀಕ್ಷೆ ಬರೆದರು. ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರದ ಹೊರಗೆ ತಪಾಸಣೆ ಮಾಡಿ, ಕೇಂದ್ರದೊಳಗೆ ಬಿಡಲಾಯಿತು. ಅಕ್ರಮ ತಡೆಗಟ್ಟಲು ವಿಶೇಷ ನಿಗಾ ವಹಿಸಲಾಗಿತ್ತು. ಎಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಣಿ ಮಾಡಿಸಿದ್ದರು. ಎಷ್ಟು ಜನ ಹಾಜರಾಗಿದ್ದರು ಎಂಬ ವಿವರ ಜಿಲ್ಲಾಡಳಿತ ಹಂಚಿಕೊಂಡಿಲ್ಲ.
ಅಕ್ರಮ ತಡೆಗೆ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಆದೇಶ ಹೊರಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.