ರಾಜಕುಮಾರ, ಬಸ್ ಚಾಲಕ
ಬೀದರ್: ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ಹೊಂದಿಕೊಂಡಿರುವ ಡಿಪೋ–1ರಲ್ಲಿ ನಿಲ್ಲಿಸಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೀದರ್ ತಾಲ್ಲೂಕಿನ ಆಣದೂರ ಗ್ರಾಮದ ರಾಜಕುಮಾರ (59) ಮೃತ ಚಾಲಕ. ‘ಬೀದರ್ ಟು ಬಳ್ಳಾರಿ ಸ್ಲೀಪರ್ ಕೋಚ್ ಬಸ್ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದರು. ಡಿಪೋ–1ರಲ್ಲಿ ನಿಲ್ಲಿಸಿದ್ದ ಬಸ್ಸಿನೊಳಗೆ ಬುಧವಾರ ರಾತ್ರಿ ನೇಣು ಹಾಕಿಕೊಂಡು ಜೀವ ತ್ಯಜಿಸಿದ್ದಾರೆ.
ಐದು ತಿಂಗಳಲ್ಲಿ ಅವರು ಕೆಲಸದಿಂದ ನಿವೃತ್ತರಾಗುವವರಿದ್ದರು. ಅವರ ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಇನ್ನಷ್ಟೇ ಆತ್ಮಹತ್ಯೆಗೆ ಕಾರಣ ಗೊತ್ತಾಗಬೇಕಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಬೀದರ್‌ನ ನೂತನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪರಿಹಾರಕ್ಕೆ ಆಗ್ರಹ:
‘ಮೇಲಧಿಕಾರಿಗಳ ಕಿರುಕುಳದಿಂದ ಬೇಸತ್ತು ರಾಜಕುಮಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ₹50 ಲಕ್ಷ ಪರಿಹಾರ ನೀಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ಕೊಡಬೇಕು’ ಎಂದು ಕೆಎಸ್‌ಆರ್‌ಟಿಸಿ ನೌಕರರ ಜಂಟಿ ಹೋರಾಟ ಸಮಿತಿ ಆಗ್ರಹಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.