ADVERTISEMENT

ಕುಂಭಮೇಳ ಯಾತ್ರಿಕರ ಸಾವಿನ ವಿಷಯದಿಂದ ದುಃಖ, ಆಘಾತ; ಸಚಿವ ರಹೀಂ ಖಾನ್‌

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 9:59 IST
Last Updated 21 ಫೆಬ್ರುವರಿ 2025, 9:59 IST
<div class="paragraphs"><p>ರಹೀಂ ಖಾನ್‌</p></div>

ರಹೀಂ ಖಾನ್‌

   

ಬೀದರ್‌: ಉತ್ತರ ಪ್ರದೇಶದ ವಾರಾಣಸಿ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕುಂಭಮೇಳಕ್ಕೆ ತೆರಳಿದ್ದ ಬೀದರ್‌ನ ಐವರು ಮೃತಪಟ್ಟಿರುವ ವಿಷಯ ಕೇಳಿ ದುಃಖ ಮತ್ತು ಆಘಾತವಾಗಿದೆ ಎಂದು ಪೌರಾಡಳಿತ ಮತ್ತು ಹಜ್‌ ಖಾತೆ ಸಚಿವ ರಹೀಂ ಖಾನ್‌ ತಿಳಿಸಿದ್ದಾರೆ.

ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬದೊಂದಿಗೆ ಸರ್ಕಾರ ಇದೆ. ಮೃತರಿಗೆ ಸಂತಾಪ ವ್ಯಕ್ತಪಡಿಸುತ್ತೇನೆ. ಘಟನೆ ಸಂಬಂಧ ನಾನು ಹಾಗೂ ಸಚಿವ ಈಶ್ವರ ಬಿ. ಖಂಡ್ರೆ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಿದ್ದೇವೆ. ಮೃತದೇಹ ತರಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ADVERTISEMENT

ಮೃತರ ಕುಟುಂಬಗಳಿಗೆ ದೇವರು ದುಃಖ ಸಹಿಸುವ ಶಕ್ತಿಯನ್ನು ನೀಡಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.